ಮಂಗಳವಾರ, ಏಪ್ರಿಲ್ 29, 2025
HomeCinemaAnushka Shetty: ಬರ್ತ್‍ಡೇ ದಿನವೇ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ..

Anushka Shetty: ಬರ್ತ್‍ಡೇ ದಿನವೇ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ರು ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ..

- Advertisement -

ಅನುಷ್ಕಾ ಶೆಟ್ಟಿ (Anushka Shetty) ಈ ಹೆಸರು ಯಾರಿಗೆ ತಾನೇ ಗೊತ್ತಿಲ್ಲ.. ಕನ್ನಡ ನೆಲದಲ್ಲಿ ಹುಟ್ಟಿ ಬೆಳೆದು, ತೆಲುಗು, ತಮಿಳು ಚಿತ್ರರಂಗದಲ್ಲಿ ದಶಕಗಳಿಂದ ಮಿಂಚುತ್ತಿರುವ ಚೆಲುವೆ ಅನುಷ್ಕಾ ಶೆಟ್ಟಿ. ಇವರು 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಅನುಷ್ಕಾ ತಮ್ಮ ಅಭಿಮಾನಿಗಳಿಗೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಇದನ್ನೂ ಓದಿ: Adipurush movie: ಚಿತ್ರತಂಡದ ‘ಆ’ ಎಡವಟ್ಟಿನಿಂದ ‘ಆದಿಪುರುಷ್’ ಸಿನಿಮಾ ರಿಲೀಸ್ ಡೇಟ್ ಮುಂದಕ್ಕೆ

ತಮ್ಮ ಹುಟ್ಟುಹಬ್ಬದ ವಿಶೇಷ ದಿನದಂದು ಅನುಷ್ಕಾ ಶೆಟ್ಟಿ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಅದೇನಪ್ಪ ಅಂದ್ರೆ, ತಮ್ಮ ಮುಂದಿನ ಚಿತ್ರದ ಲುಕ್ ರಿವೀಲ್ ಮಾಡಿದ್ದಾರೆ. ಪೋಸ್ಟರ್ ಒಂದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅನುಷ್ಕಾ ಮುಂದಿನ ಚಿತ್ರದಲ್ಲಿ ತಮ್ಮ ಪಾತ್ರದ ಸುಳಿವನ್ನು ಬಹಿರಂಗಪಡಿಸಿದ್ದಾರೆ.

ಈ ಸಿನಿಮಾದ ಮೂಲಕ ಮೂರು ವರ್ಷಗಳ ಬಳಿಕ ಅನುಷ್ಕಾ ಶೆಟ್ಟಿ ಕಮ್ ಬ್ಯಾಕ್ ಮಾಡುತ್ತಿರೋದು ವಿಶೇಷ. ಅನುಷ್ಕಾ ಮುಂದಿನ ಚಿತ್ರಗಳಿಗೆ ಕಾಯುತ್ತಿರುವ ಅಭಿಮಾನಿಗಳಿಗೆ ತಮ್ಮ ಪೋಸ್ಟರ್ ಮೂಲಕ ಮತ್ತೆ ಬಿಗ್ ಸ್ಕ್ರೀನ್ ನಲ್ಲಿ ಕಾಣಿಸಿಕೊಳ್ಳಲಿರುವ ಹಿಂಟ್ ನೀಡಿದ್ದಾರೆ ಈ ಕರಾವಳಿ ಚೆಲುವೆ.

ಇನ್ನೂ ಹೆಸರಿಡದ ಈ ಸಿನಿಮಾದಲ್ಲಿ ನವೀನ್ ಪೊಲಿಶೆಟ್ಟಿ ಅನುಷ್ಕಾಗೆ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ. ಅಂದಹಾಗೆ, ಅನುಷ್ಕಾ ಶೆಟ್ಟಿ ತಮ್ಮ ಮುಂದಿನ ಸಿನಿಮಾದಲ್ಲಿ ಮಾಸ್ಟರ್ ಚೆಫ್ ಆಗಿ ಮಿಂಚಲಿದ್ದಾರೆ. ಅಡುಗೆಮನೆಯಲ್ಲಿ ಅಡುಗೆ ತಯಾರಿಸುವ ಬಾಣಸಿಗ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಅನ್ವಿತಾ ರಾವಲಿ ಶೆಟ್ಟಿ ಎಂಬ ಪಾತ್ರಕ್ಕೆ ಅವರು ಜೀವ ತುಂಬಲಿದ್ದಾರೆ. ಯುವಿ ಕ್ರಿಯೇಷನ್ಸ್ ಅಡಿಯಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.

ಇದನ್ನೂ ಓದಿ: Abu Dhabi T10 : ಅಬುಧಾಬಿ T10 ಟೂರ್ನಿಯಲ್ಲಿ ಆಡಲಿದ್ದಾರೆ ಸುರೇಶ್ ರೈನಾ, ಸ್ಟುವರ್ಟ್ ಬಿನ್ನಿ

ಇನ್ನು ಅನುಷ್ಕಾ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಚಿತ್ರತಂಡವು ಅನುಷ್ಕಾರ ಪೋಸ್ಟರ್ ರಿವೀಲ್ ಮಾಡಿ ಬರ್ತ್‍ಡೇಗೆ ಶುಭಾಶಯ ಕೋರಿದೆ. ಪಿ.ಬಾಬು ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದು, ಮುಂದಿನ ವರ್ಷ ತೆರೆಗೆ ಅಪ್ಪಳಿಸಲಿದೆ.

Anushka Shetty: Anushka Shetty plays a chef in her next film, see first look

RELATED ARTICLES

Most Popular