ಬೆಂಗಳೂರು : ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ಗೊಂದಲಕ್ಕೆ ಸಿಲುಕಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಕೊನೆಗೂ ಗುಡ್ ನ್ಯೂಸ್ ಕೊಟ್ಟಿದೆ. ತಮ್ಮ ಜಿಲ್ಲಾ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಂದ ಮಾಹಿತಿ ಕಲೆಹಾಕುತ್ತಿದೆ.

ಪಿಯುಸಿ ಪರೀಕ್ಷೆ ನಡೆಸುವುದರಿಂದ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ತಮ್ಮ ಮನೆ ಸಮೀಪದ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳು ತಮ್ಮ ಹೆಸರು, ಕಾಲೇಜಿನ ಸಂಖ್ಯೆ, ವಿದ್ಯಾರ್ಥಿ ಸಂಖ್ಯೆ, ನೋಂದಣಿ ಸಂಖ್ಯೆ, ಮೊಬೈಲ್ ನಂಬರ್, ಜಿಲ್ಲೆಯ ಹೆಸರು ಹಾಗೂ ಪರೀಕ್ಷಾ ಕೇಂದ್ರಗಳ ಕೋಡ್ ಕುರಿತ ಮಾಹಿತಿಯನ್ನು ddtt.pue@gmail.com ಈ ಮೇಲ್ ಮೂಲಕ ಮಾಹಿತಿ ನೀಡಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸೂಚಿಸಿದೆ.

ಇನ್ನು ಕೊರೊನಾ ಕಾಲ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ಎಸ್ಎಸ್ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಕೂಡ ಸೋಮವಾರವೇ ಬಿಡುಗಡೆಯಾಗಲಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈ ಕುರಿತು ಮಾಹಿತಿಯನ್ನು ನೀಡಿದ್ದು, ಸೋಮವಾರ ತಜ್ಞರು ಹಾಗೂ ಅಧಿಕಾರಿಗಳ ಸಭೆ ನಡೆಯಲಿದೆ.

ಈಗಾಗಲೇ ಎಸ್ಎಸ್ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ ಫಿಕ್ಸ್ ಆಗಿದ್ದು, ಸೋಮವಾರ ವೇಳಾಪಟ್ಟಿ ಪ್ರಕಟವಾಗುವುದು ಖಚಿತ. ಕೊರೊನಾ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಶಿಕ್ಷಣ ಇಲಾಖೆ ಈಗಾಗಲೇ ಸೂಚನೆಯನ್ನು ನೀಡಿದ್ದಾರೆ.