ಮಂಗಳವಾರ, ಏಪ್ರಿಲ್ 29, 2025
HomeCinemaJacqueline Fernandez: 'ಜಾಕ್ವೆಲಿನ್ ಬಂಧನ ಯಾಕೆ ಇನ್ನೂ ಆಗಿಲ್ಲ'..? ಇಡಿ ಅಧಿಕಾರಿಗಳಿಗೆ ಕೋರ್ಟ್ ತರಾಟೆ

Jacqueline Fernandez: ‘ಜಾಕ್ವೆಲಿನ್ ಬಂಧನ ಯಾಕೆ ಇನ್ನೂ ಆಗಿಲ್ಲ’..? ಇಡಿ ಅಧಿಕಾರಿಗಳಿಗೆ ಕೋರ್ಟ್ ತರಾಟೆ

- Advertisement -

ನವದೆಹಲಿ: Jacqueline Fernandez: 200 ಕೋಟಿ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಎದುರಿಸುತ್ತಿರುವ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಯಾಕೆ ಇನ್ನೂ ಬಂಧಿಸಿಲ್ಲ ಎಂದು ದೆಹಲಿ ಕೋರ್ಟ್ (delhi court )ಜಾರಿ ನಿರ್ದೇಶನಾಲಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದೆ.

ಇಂದು ಜಾಕ್ವೆಲಿನ್ ಮಧ್ಯಂತರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಕರಣದ ಆರೋಪಿ ಜಾಕ್ವೆಲಿನ್ ಗೆಳೆಯ ಸುಕೇಶ್ ಚಂದ್ರಶೇಖರ್ ಸೇರಿದಂತೆ ಹಲವರು ಜೈಲಿನಲ್ಲಿದ್ದಾರೆ. ಎಲ್ಲರೂ ಜೈಲಿನಲ್ಲಿರುವಾಗ ಜಾಕ್ವೆಲಿನ್ ಮಾತ್ರ ಯಾಕೆ ಹೊರಗಿದ್ದಾರೆ..? ಅವರನ್ನು ಇನ್ನೂ ಬಂಧಿಸಿಲ್ಲವೇಕೆ..? ಯಾಕೆ ಈ ಇಬ್ಬಂದಿತನ ಎಂದು ಖಡಕ್ ಆಗಿ ಪ್ರಶ್ನಿಸಿದೆ.

ಇದನ್ನೂ ಓದಿ: Jadeja’s wife gets BJP ticket : ವಿಧಾನಸಭಾ ಚುನಾವಣೆ: ರವೀಂದ್ರ ಜಡೇಜಾ ಪತ್ನಿಗೆ ಬಿಜೆಪಿ ಟಿಕೆಟ್

ಇದಕ್ಕೂ ಮೊದಲು ಇಡಿ ಅಧಿಕಾರಿಗಳು, ನಟಿ ಜಾಕ್ವೆಲಿನ್ ಬಳಿ ಸಾಕಷ್ಟು ಹಣವಿದೆ. ಸುಲಭವಾಗಿ ಅವರು ದೇಶವನ್ನು ಬಿಟ್ಟು ಹೋಗಬಹುದು. ಹೀಗಾಗಿ ಅವರಿಗೆ ಜಾಮೀನು ನೀಡದಂತೆ ಮನವಿ ಮಾಡಿಕೊಂಡಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ನಾಳೆಗೆ ಕಾಯ್ದಿರಿಸಿದೆ. ಈ ಮೊದಲು ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ಕೋರ್ಟ್ ಮಧ್ಯಂತರ ಜಾಮೀನನ್ನು ನೀಡಿತ್ತು. ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಇಡಿ, ಜಾಕ್ವೆಲಿನ್ ತನಿಖೆಗೆ ಸಹಕರಿಸುತ್ತಿಲ್ಲ. ಅವರ ವಿರುದ್ಧ ಗಂಭೀರ ಆರೋಪಗಳಿವೆ. ಯಾವ ಕ್ಷಣದಲ್ಲೂ ಅವರು ದೇಶವನ್ನು ತೊರೆಯುವ ಸಾಧ್ಯತೆ ಇದೆ. ಹೀಗಾಗಿ ಅವರಿಗೆ ಜಾಮೀನು ನೀಡದಂತೆ ಇಡಿ ಕೋರ್ಟ್‍ಗೆ ಮನವಿ ಮಾಡಿದ್ದರು.

ಉದ್ಯಮಿಗಳಿಗೆ ಬರೋಬ್ಬರಿ 200 ಕೋಟಿ ರೂ.ವಂಚನೆ ಮಾಡಿದ ಆರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಜೊತೆ ನಿಕಟ ಸಂಪರ್ಕ ಹೊಂದಿರುವ ಕಾರಣಕ್ಕೆ ನಟಿ ಜಾಕ್ವೆಲಿನ್ ಅವರ ವಿಚಾರಣೆ ನಡೆಯುತ್ತಿದೆ. ಈಗಾಗಲೇ ಇಡಿ ಅಧಿಕಾರಿಗಳು ಹಲವು ಬಾರಿ ಜಾಕ್ವೆಲಿನ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಹಿನ್ನೆಲೆ ನಟಿ ನ್ಯಾಯಾಲಯದ ಮೊರೆ ಹೋಗಿದ್ದರು.

ಇದನ್ನೂ ಓದಿ: Kantara Hindi Collection : ಹಿಂದಿಯಲ್ಲಿ 70 ಕೋಟಿ ಕಲೆಕ್ಷನ್ ದಾಟಿದ ‘ಕಾಂತಾರ’

ಪ್ರಕರಣದ ಹಿನ್ನೆಲೆ: ರಾನ್‍ಬಾಕ್ಸಿ ಸಂಸ್ಥೆಯ ಶಿವಿಂದರ್ ಸಿಂಗ್ ಅವರು ಬೇರೊಂದು ಹಣ ಅವ್ಯವಹಾರ ಪ್ರಕರಣದಲ್ಲಿ ಕಳೆದ 2019ರಲ್ಲಿ ಜೈಲು ಸೇರಿದ್ದರು. ಅವರನ್ನು ಜೈಲಿನಿಂದ ಕರೆತರುವ ಭರವಸೆ ನೀಡಿದ್ದ ಸುಕೇಶ್ ಚಂದ್ರಶೇಖರ್, ಶಿವಿಂದರ್ ಪತ್ನಿ ಅವರಿಂದ 200 ಕೋಟಿ ರೂ. ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಶಿವಿಂದರ್ ಸಿಂಗ್ ಪತ್ನಿ ಅದಿತಿ ಸಿಂಗ್ ಸುಕೇಶ್ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಸುಕೇಶ್ ಚಂದ್ರಶೇಖರ್ ಜೊತೆ ನಟಿ ಜಾಕ್ವೆಲಿನ್ ನಿಕಟ ಸಂಪರ್ಕ ಹೊಂದಿದ್ದಾರೆ ಎಂದು ತಿಳಿದುಬಂದಿತ್ತು. ಕಳೆದ ಡಿಸೆಂಬರ್ ನಲ್ಲಿ ಪಿಎಂಎಲ್‍ಎ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು ಆರೋಪಪಟ್ಟಿ ದಾಖಲಿಸಿತ್ತು. ನಟಿ ಜಾಕ್ವೆಲಿನ್ ಸೇರಿದಂತೆ ಕೆಲ ಬಾಲಿವುಡ್ ನಟ-ನಟಿಯರನ್ನು ಪ್ರಕರಣದ ಸಾಕ್ಷಿದಾರರೆಂದು ತೋರಿಸಿತ್ತು. ಅದಾದ ಬಳಿಕ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಫರ್ನಾಂಡಿಸ್ ನಿಕಟವಾಗಿರುವ ಫೋಟೋಗಳು ವೈರಲ್ ಆಗಿದ್ದವು.

ಜಾಕ್ವೆಲಿನ್‍ಗೆ ಐಷಾರಾಮಿ ಬಿಎಂಡಬ್ಲೂ ಕಾರನ್ನು ಉಡುಗೊರೆಯಾಗಿ ಸುಕೇಶ್ ಚಂದ್ರಶೇಖರ್ ನೀಡಿದ್ದ ಎಂದು ತಿಳಿದುಬಂದಿತ್ತು. ಅಲ್ಲದೇ ವಜ್ರದ ಬ್ರಾಸ್‍ಲೆಟ್, ಫ್ರಾಂಕ್ ಮುಲ್ಲರ್ ವಾಚ್, ದುಬಾರಿ ಬೆಲೆಬಾಳುವ ಗುಸ್ಸಿ, ಚಾನಲ್‍ಬ್ಯಾಗ್ ಸೇರಿದಂತೆ ಕುದುರೆಯೊಂದನ್ನೂ ನೀಡಿದ್ದ. ಅಲ್ಲದೇ ಜಾಕ್ವೆಲಿನ್ ಮ್ಯಾನೇಜರ್ ಅವರಿಗೂ ಸುಕೇಶ್ ಬೈಕ್ ಉಡುಗೊರೆ ಯನ್ನಾಗಿ ನೀಡಿದ್ದ ಎಂಬ ಮಾಹಿತಿ ಲಭಿಸಿತ್ತು. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಟಿಯ ವಿಚಾರಣೆ ನಡೆಸುತ್ತಿದ್ದಾರೆ. ಶ್ರೀಲಂಕಾ ಮೂಲದ ನಟಿ ಜಾಕ್ವೆಲಿನ್ ಫರ್ನಾಂಡಿಸ್ 25ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಬಿಡುಗಡೆಯಾದ ವಿಕ್ರಾಂತ್ ರೋಣ ಸಿನಿಮಾದಲ್ಲಿ ಕಿಚ್ಚನಿಗೆ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ

Jacqueline Fernandez: delhi court asks Ed “Why Not Arrest Jacqueline Fernandez till now?

RELATED ARTICLES

Most Popular