ಸೋಮವಾರ, ಏಪ್ರಿಲ್ 28, 2025
HomekarnatakaMandous Cyclone Effect : ಮಾಂಡೌಸ್ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಚಳಿಗಾಳಿ, ಎಚ್ಷರಿಕೆ ಕೊಟ್ಟ...

Mandous Cyclone Effect : ಮಾಂಡೌಸ್ ಚಂಡಮಾರುತ ಎಫೆಕ್ಟ್ : ರಾಜ್ಯದಲ್ಲಿ ಚಳಿಗಾಳಿ, ಎಚ್ಷರಿಕೆ ಕೊಟ್ಟ ಆರೋಗ್ಯ‌ ಸಚಿವ

- Advertisement -

ಬೆಂಗಳೂರು : ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿ ಮಾಂಡೌಸ್ ಚಂಡಮಾರುತದ (Mandous Cyclone Effect) ರೂಪ ತಾಳಿದ ಪರಿಣಾಮದಿಂದಾಗಿ ನೆರೆಯ ರಾಜ್ಯಗಳಲ್ಲಿ ಭಾರೀ ಮಳೆ ಉಂಟಾಗಿದೆ. ಇದರಿಂದಾಗಿ ಕರ್ನಾಟಕ ರಾಜ್ಯದ ಮೇಲೆ ಪರಿಣಾಮ ಬಿದ್ದಿದ್ದರಿಂದ ರಾಜ್ಯದಾದ್ಯಂತ ತುಂತುರು ಮಳೆ ಹಾಗೂ ಶೀತ ಗಾಳಿ ಬೀಸುತ್ತಿದೆ. ಇದು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಇದ್ದರಿಂದಾಗಿ ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆ ಸಚಿವ ಸುಧಾಕರ್‌ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿ, ಚಳಿ, ಶೀತಕ್ಕೂ ಕೋವಿಡ್‌ಗೂ ಯಾವುದೇ ಸಂಬಂಧವಿಲ್ಲವೆಂದು ಸ್ಪಷ್ಟನೆಯನ್ನು ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ಸುಧಾಕರ್‌ ಚಳಿಗಾಲದ ಜೊತೆ ಚಂಡಮಾರುತದ ಎಫೆಕ್ಟ್‌ ಕೂಡ ಇದೆ. ಹಾಗಾಗಿ ಮಕ್ಕಳು, ವೃದ್ದರು ತುಂಬಾ ಎಚ್ಚರಿಕೆಯಿಂದ ಇರಬೇಕು. ಮನೆಯಲ್ಲಿ ಪೋಷಕರಾದವರು ಮಕ್ಕಳು ಹಾಗೂ ವೃದ್ಧರನ್ನು ತುಂಬಾ ಜಾಗೃತೆಯಲ್ಲಿ ನೋಡಿಕೊಳ್ಳಬೇಕು. ವೈದ್ಯರಿಗೂ ಎಚ್ಚರವಹಿಸಲು ಸಭೆ ಕರೆದು ಸೂಚಿಸುತ್ತೇನೆ. ಉಸಿರಾಟದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಹೊರಡಿಸಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Karnataka weather report: ಚಳಿಗೆ ಕರ್ನಾಟಕ ತತ್ತರ : ಡಿಸೆಂಬರ್ 16ರ ವರೆಗೆ ಮಳೆ ಮುಂದುವರಿಕೆ, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಇದನ್ನೂ ಓದಿ : ಮಾಂಡೌಸ್ ಚಂಡಮಾರುತ ನಿರಂತರ ಮಳೆ : ಶಾಲೆಗಳಿಗೆ ರಜೆ ಘೋಷಣೆ

ಇದನ್ನೂ ಓದಿ : mandous cyclone Yellow Alert : ಕರ್ನಾಟಕದಲ್ಲಿ ಮಳೆ ಮುಂದುವರಿಕೆ : 10ಕ್ಕೂ ಅಧಿಕ ಜಿಲ್ಲೆಗಳಲ್ಲಿ ಹಳದಿ ಅಲರ್ಟ್

ಇದನ್ನೂ ಓದಿ : Oath ceremony: ಹಿಮಾಚಲ ಪ್ರದೇಶದ ನೂತನ ಸಿಎಂ ಆಗಿ ಸುಖವೀಂದರ್ ಸಿಂಗ್, ಡಿಸಿಎಂ ಆಗಿ ಮುಖೇಶ್ ಅಗ್ನಿಹೋತ್ರಿ ಅಧಿಕಾರ ಸ್ವೀಕಾರ

ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೂ ಮುಂಜಾಗ್ರತೆ ಕ್ರಮ ವಹಿಸಲು ಈಗಾಗಲೇ ಸೂಚಿಸಿದ್ದೇನೆ. ಆಸ್ಪತ್ರೆಗಳಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈಗ ಸಭೆ ಕರೆದು ವೈದ್ಯರಿಗೂ ಸೂಚನೆ ನೀಡುತ್ತೇನೆ. ಈ ವಾತಾವರಣದಿಂದ ಕೋವಿಡ್‌ ಹೆಚ್ಚಾಗುವುದಿಲ್ಲ. ಆದರೆ ದೇಹವನ್ನು ಬೆಚ್ಚಗೆ ಕಾಪಾಡಿಕೊಳ್ಳಬೇಕು. ಈಗಾಗಲೇ ಕೆಲವು ಕಡೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ನಾವು ಕೂಡ ಮುಂಜಾಗ್ರತೆ ವಹಿಸುತ್ತಿದ್ದೇವೆ ಎಂದ ಸಚಿವ ಡಾ. ಕೆ.ಸುಧಾಕರ್‌ ತಿಳಿಸಿದ್ದಾರೆ.

Mandous Cyclone Effect : Cold wind in the state, health minister warned

RELATED ARTICLES

Most Popular