(Zilla Panchayat Recruitment)ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗೆ ನರೇಗಾ ಯೋಜನೆಯಡಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗದಲ್ಲಿ ಹುದ್ದೆಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 23 , 2022 ರ ಮೊದಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
(Zilla Panchayat Recruitment)ಹುದ್ದೆಯ ಸಂಪೂರ್ಣ ವಿವರ:
ಸಂಸ್ಥೆಯ ಹೆಸರು : ಶಿವಮೊಗ್ಗ ಜಿಲ್ಲಾ ಪಂಚಾಯತ್
ಹುದ್ದೆಯ ಹೆಸರು : ಖಾತೆಗಳ ವ್ಯವಸ್ಥಾಪಕ (ಅಕೌಂಟ್ಸ್ ಮ್ಯಾನೇಜರ್)
ಹುದ್ದೆಯ ಸಂಖ್ಯೆ:1
ಉದ್ಯೋಗ ಸ್ಥಳ : ಶಿವಮೊಗ್ಗ
ವಿದ್ಯಾರ್ಹತೆ ವಿವರ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು M.Com, MBA Finance ಪೂರ್ಣಗೊಳಿಸಿರಬೇಕು.
ವಯೋಮಿತಿ ವಿವರ:
ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳು 35 ವಯಸ್ಸಿನವರಾಗಿರಬೇಕು.
ಅರ್ಜಿ ಶುಲ್ಕ: ಅರ್ಜಿ ಶುಲ್ಕ ಇಲ್ಲ
ಅಯ್ಕೆ ಪ್ರಕ್ರಿಯೆ :ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ:KVS Recruitment:ಕೇಂದ್ರೀಯ ವಿದ್ಯಾಲಯದಲ್ಲಿ 13,404 ಬೋಧಕ, ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ:SBI Recruitment 2022: ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನ
ಇದನ್ನೂ ಓದಿ:KSRLPS Recruitment:ಪದವೀಧರರಿಗೆ ಉದ್ಯೋಗಾವಕಾಶ : ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನ :
ಶಿವಮೊಗ್ಗ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ)9-12-2022 ರಿಂದ 23-12- 2022ರ ಮೊದಲು ಶಿವಮೊಗ್ಗ ಜಿಲ್ಲಾ ಪಂಚಾಯತ್ ನ ಅಧಿಕೃತ ವೆಬ್ ಸೈಟ್ ಆದ shimoga.nic.in ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:9- ಡಿಸೆಂಬರ್ -2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :23 – ಡಿಸೆಂಬರ್-2022
Zilla Panchayat Recruitment Shivamogga Applications invited for the post of Accounts Manager