ಮಂಗಳೂರು : Surathkal Stab : ಕರಾವಳಿಯಲ್ಲಿ ಮತ್ತೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಸುರತ್ಕಲ್ ನ ಕಾಟಿಪಳ್ಳದಲ್ಲಿ ಯುವಕನಿಗೆ ಚಾಕು ಇರಿತವಾಗಿದ್ದು, ಆರೋಪಿಗಳು ಪರಾರಿಯಾಗಿದ್ದಾರೆ.
ಜಲೀಲ್ ಎಂಬಾತನೇ ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾದ ಯುವಕ. ಸದ್ಯ ಗಂಭೀರವಾಗಿ ಗಾಯಗೊಂಡಿರುವ ಜಲೀಲ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಜಲೀಲ್ ಫ್ಯಾನ್ಸಿ ಅಂಗಡಿಯ ಮಾಲೀಕರಾಗಿದ್ದು, ಅಂಗಡಿಯ ಮುಂಭಾಗದಲ್ಲಿ ನಿಂತಿದ್ದ ವೇಳೆಯಲ್ಲಿ ಸ್ಥಳಕ್ಕೆ ಬಂದ ದುಷ್ಕರ್ಮಿಗಳ ತಂಡ ಚಾಕುವಿನಿಂದ ಇರಿದು ಪರಾರಿಯಾಗಿದೆ.
ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಸುರತ್ಕಲ್ ಠಾಣೆಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ : Sreyas Gopal IPL: ಶ್ರೇಯಸ್ ಗೋಪಾಲ್ ಐಪಿಎಲ್ ಕರಿಯರ್‌ಗೆ ಕೊಳ್ಳಿ ಇಟ್ಟವರು ನಮ್ಮವರೇ!
Surathkal Stab Man Krishnapur Near Mangalore