ವಿಜಯಪುರ: ( News Next Kannada ) : ನಡೆದಾಡುವ ದೇವರು ಎಂಬ ಖ್ಯಾತಿಗೆ ಪಾತ್ರರಾಗಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (Siddeshwara Swamiji passes away) ಅವರು ಇಂದು (ಜನವರಿ 02) ವಿಧಿವಶರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುಹಿತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಲಿಂಗೈಕ್ಯರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲು ಖುದ್ದು ಸಿಎಂ ಬಸವರಾಜ್ ಬೊಮ್ಮಾಯಿ ಅವರೇ ಮನವಿ ಮಾಡಿಕೊಂಡಿದ್ದರು. ಆದರೆ ಸ್ವಾಮೀಜಿ ಅವರು ಆಸ್ಪತ್ರೆಗೆ ದಾಖಲಾಗಲು ಮನಸ್ಸು ಮಾಡಿರಲಿಲ್ಲ. ಕಳೆದ ಒಂದು ತಿಂಗಳಿನಿಂದಲೂ ಸ್ವಾಮೀಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆಶ್ರಮದಲ್ಲಿ ವಿಜಯಪುರದ ಬಿಎಲ್ಡಿಇ ಆಸ್ಪತ್ರೆಯ ವೈದ್ಯರ ತಂಡ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆದರೆ ಇಂದು ಸಂಜೆ ಆರು ಗಂಟೆಗೆ ಅವರು ವಿಧಿವಶರಾಗಿದ್ದಾರೆ.
ಮಧ್ಯಾಹ್ನ 3 ಗಂಟೆಯ ವರೆಗೂ ಸಾರ್ವಜನಿಕರಿಗೆ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಂಜೆ ನಾಲ್ಕು ಗಂಟೆಗೆ ಸರಕಾರದಿಂದ ಗಾರ್ಡ್ ಹಾಪ್ ಹಾನರ್, 5 ಗಂಟೆಗೆ ಸೈನಿಕ ಶಾಲೆಗೆ ಪಾರ್ಥಿವ ಶರೀರ, ಜ್ಞಾನ ಯೋಗಾಶ್ರಮದಲ್ಲಿಯೇ ಅಂತ್ಯ ಕ್ರೀಯೆ ನಡೆಸಲು ತೀರ್ಮಾನಿಲಸಾಗಿದೆ. ತಮ್ಮ ಯಾವುದೇ ಅವಶೇಷಗಳು ಉಳಿಯ ಬಾರದು ಎಂಬ ಕಾರಣಕ್ಕೆ ತಮಗೆ ಗದ್ದುಗೆ ಬೇಡ ಮಣ್ಣು ಮಾಡಿ ಎಂದು ಹೇಳಿದ್ದರು.
Siddeshwara Swamiji passes away : ಸಿದ್ದೇಶ್ವರ ಸ್ವಾಮೀಜಿ ನಿಧನಕ್ಕೆ ಸಿಎಂ ಕಂಬನಿ
ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು. ಶ್ರೀಗಳ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದೆ. ಶ್ರೀಗಳ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ನಾಡಿನಾದ್ಯಂತ ಇರುವ ಶ್ರೀಗಳ ಭಕ್ತ ಸಮೂಹಕ್ಕೆ ಈ ದುಃಖವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಟ್ವೀಟ್ ಮೂಲಕ ಶ್ರದ್ದಾಂಜಲಿ ಅರ್ಪಿಸಿದ್ದಾರೆ.
ಇದನ್ನೂ ಓದಿ : ಇನ್ನು ಮುಂದೆ ಗ್ರಾಮ ಪಂಚಾಯಿತಿ ಯಲ್ಲೇ ಕಡ್ಡಾಯ ವಿವಾಹ ನೋಂದಣಿ ಮಾಡಿ
ಇದನ್ನೂ ಓದಿ : ಕರ್ನಾಟಕದಲ್ಲಿ ಜಾರಿಯಾಗುತ್ತಾ ಲಾಕ್ ಡೌನ್ : ಮಾರ್ಗಸೂಚಿ ಪ್ರಕಟ, ವಿದೇಶಿ ಪ್ರಯಾಣಿಕರಿಗೆ ಕ್ವಾರಂಟೈನ್ ಕಡ್ಡಾಯ
ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು.
— Basavaraj S Bommai (@BSBommai) January 2, 2023
1/2 pic.twitter.com/WvNjQDmkJJ
vijayapura Jnana Yogaashrama Sri Siddeshwara Swamiji passes away