ಭಾನುವಾರ, ಏಪ್ರಿಲ್ 27, 2025
HomeCoastal Newstipper Theft : ಸಾಸ್ತಾನ ಟೋಲ್ ಗೇಟ್, ನಿಲ್ಲಿಸಿದ್ದ ಟಿಪ್ಪರ್ ಕಳವು

tipper Theft : ಸಾಸ್ತಾನ ಟೋಲ್ ಗೇಟ್, ನಿಲ್ಲಿಸಿದ್ದ ಟಿಪ್ಪರ್ ಕಳವು

- Advertisement -

ಕೋಟ : tipper Theft : ಟೋಲ್ ಗೇಟ್ ಬಳಿಯಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಸ್ತಾನದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಶಯದ ಮೇರೆಗೆ ಇಬ್ಬರು ವ್ಯಕ್ತಿಗಳ ವಿರುದ್ದ ಇದೀಗ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಸ್ತಾನ ಗುಂಡ್ಮಿಯ ನವಯುಗ ಟೋಲ್ ಗೇಟ್ ಬಳಿಯಲ್ಲಿ ಟಿಪ್ಪರ್ ನಿಲ್ಲಿಸಿದ್ದರು. ಆದರೆ ಮರು ದಿನ ಬಂದು ನೋಡಿದಾಗ ಟಿಪ್ಪರ್ ಕಳವಾಗಿತ್ತು. ಈ ಕಳವಿಗೆ ಹೇಮಂತ್ ಹಾಗೂ ನವೀನ್ ಎಂಬವರೇ ಕಾರಣವಿರಬಹುದು ಅನ್ನೋ ಸಂಶಯದ ಹಿನ್ನೆಲೆಯಲ್ಲಿ ಐರೋಡಿ ಅಲ್ಸೆಬೆಟ್ಟು ಗ್ರಾಮದ ನಿವಾಸಿಯಾಗಿರುವ ಮಹಾಬಲೇಶ್ವರ ಕಾರಂತ ಎಂಬವರು ಟಿಪ್ಪರ್ ಕಳವಿಗೆ ಸಂಬಂಧಿಸಿದಂತೆ ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆ ಎರಡು ತಿಂಗಳ ಹಿಂದೆ ನಡೆದಿದ್ದು ತಡವಾಗಿ ದೂರು ದಾಖಲಾಗಿದೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ : E-mail Bomb threat: ಬೆಂಗಳೂರಿನ ಖಾಸಗಿ ಶಾಲೆಯೊಂದಕ್ಕೆ‌ ಹುಸಿ ಬಾಂಬ್ ಬೆದರಿಕೆ: ಸುರಕ್ಷಿತ ಸ್ಥಳಕ್ಕೆ ವಿದ್ಯಾರ್ಥಿಗಳು ಶಿಫ್ಟ್

ಕರಳು ಸಂಬಂಧಿ ಕಾಯಿಲೆಯಿಂದ ಬೇಸತ್ತು ಮಹಿಳೆ ಆತ್ಮಹತ್ಯೆ

ಹಿರಿಯಡ್ಕ : ಕರಳು ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಪೆರ್ಡೂರು ಗ್ರಾಮದ ಹತ್ರಬೈಲು ಎಂಬಲ್ಲಿನ ಹಾಡಿಯಲ್ಲಿ ನಡೆದಿದೆ. ಇದನ್ನೂ ಓದಿ : UP car accident: ಸೈಕಲ್‌ ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿ ಮೇಲೆ ಹರಿದ ಕಾರು: ಚಾಲಕ ಅರೆಸ್ಟ್‌

ರಾಧಿಕಾ ( 39 ವರ್ಷ) ಎಂಬವರೇ ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಒಂದು ವರ್ಷಗಳಿಂದಲೂ ರಾಧಿಕಾ ಅವರು ಕರಳು ಸಂಬಂಧಿ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದರು. ಇದರಿಂದಾಗಿ ಸಾಕಷ್ಟು ಮನನೊಂದಿದ್ದರು. ಇದೇ ಕಾರಣಕ್ಕೆ ಮನೆಯ ಪಕ್ಕದ ಹಾಡಿಯಲ್ಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಪತಿ ರಾಘವೇಂದ್ರ ಎಂಬವರು ಹಿರಿಯಡ್ಕ ಠಾಣೆಯ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ : Deadbody found in car: 3 ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾರಿನಲ್ಲಿ ಪತ್ತೆ

tipper Theft parked at the Sastana toll gate was stolen Udupi

Kannada News Next Deskhttp://kannada.newsnext.live
Kannada News Next Live brings latest news from India and World on breaking news, today news headlines, politics, business, technology, Sports, Education in Kannada Language since 2020. kannada.newsnext.live it was first indexed by Google in July 2021
RELATED ARTICLES

Most Popular