ಬ್ಯಾಂಕ್ ಆಫ್ ಬರೋಡಾ ನೇಮಕಾತಿಯ (Bank of Baroda Recruitment 2023) ಅಧಿಕೃತ ಅಧಿಸೂಚನೆಯಲ್ಲಿ ಖಾಲಿ ಇರುವ ಡಿವೈ ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ, ಮುಖ್ಯಸ್ಥ ಹುದ್ದೆಗಳ ಭರ್ತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಈ ಖಾಲಿ ಇರುವ ಹುದ್ದೆಗಳಿಗಾಗಿ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯಸ್ಸಿನ ಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಸಂಬಂಧಪಟ್ಟಂತೆ ಬೇಕಾಗುವ ಇತರೆ ಎಲ್ಲಾ ಮಾಹಿತಿಯನ್ನು ಈ ಕೆಳಗೆ ವಿವರಿಸಲಾಗಿದೆ. ಹೀಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿ ಅರ್ಜಿ ಸಲ್ಲಿಸಬೇಕಾಗಿದೆ.
ಬ್ಯಾಂಕ್ ಆಫ್ ಬರೋಡಾ ಹುದ್ದೆಯ ಅಧಿಸೂಚನೆ ಸಂಪೂರ್ಣ ವಿವರ :
ಬ್ಯಾಂಕ್ ಹೆಸರು : ಬ್ಯಾಂಕ್ ಆಫ್ ಬರೋಡಾ (BOB)
ಹುದ್ದೆಗಳ ಸಂಖ್ಯೆ : 9 ಹುದ್ದೆಗಳು
ಉದ್ಯೋಗ ಸ್ಥಳ : ಅಖಿಲ ಭಾರತ
ಹುದ್ದೆಯ ಹೆಸರು : ಡಿವೈ. ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ, ಮುಖ್ಯಸ್ಥ
ವೇತನ : ರೂ.900000-1800000/- ವರ್ಷಕ್ಕೆ
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಿವರ :
- ಡಿವೈ. ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ (DDBA) : 5 ಹುದ್ದೆಗಳು
- ರಕ್ಷಣಾ ಸಂಬಂಧ ನಿರ್ವಾಹಕ (DRM) : 2 ಹುದ್ದೆಗಳು
- ಮುಖ್ಯ – ಎಚ್ಆರ್ ಅನಾಲಿಟಿಕ್ಸ್ : 1 ಹುದ್ದೆ
- ಹಿರಿಯ ಮ್ಯಾನೇಜರ್ – ಎಚ್ಆರ್ ಅನಾಲಿಟಿಕ್ಸ್ : 1 ಹುದ್ದೆ
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಶೈಕ್ಷಣಿಕ ವಿವರ :
- ಡಿವೈ. ಡಿಫೆನ್ಸ್ ಬ್ಯಾಂಕಿಂಗ್ ಸಲಹೆಗಾರ (DDBA) : ಈ ಹುದ್ದೆಗಳಿಗಾಗಿ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಯಾವುದಾದರೂ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
- ರಕ್ಷಣಾ ಸಂಬಂಧ ವ್ಯವಸ್ಥಾಪಕ (DRM) : ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಯಾವುದಾದರೂ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
- ಮುಖ್ಯ -ಎಚ್ಆರ್ಅನಾಲಿಟಿಕ್ಸ್ : ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಯಾವುದಾದರೂ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
- ಹಿರಿಯ ಮ್ಯಾನೇಜರ್ – ಎಚ್ಆರ್ ಅನಾಲಿಟಿಕ್ಸ್ : ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಯಾವುದಾದರೂ ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ವಯೋಮಿತಿ ವಿವರ :
- ಡಿವೈ. ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ (DDBA) : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 57 ವರ್ಷ ವಯಸ್ಸು ಮೀರಿರಬಾರದು.
- ಡಿಫೆನ್ಸ್ ರಿಲೇಶನ್‌ಶಿಪ್ ಮ್ಯಾನೇಜರ್ (DRM) : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 54 ವರ್ಷ ವಯಸ್ಸು ಮೀರಿರಬಾರದು.
- ಮುಖ್ಯ -ಎಚ್ಆರ್ ಅನಾಲಿಟಿಕ್ಸ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 29 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 45 ವರ್ಷ ವಯಸ್ಸು ಮೀರಿರಬಾರದು.
- ಸೀನಿಯರ್ ಮ್ಯಾನೇಜರ್ – ಎಚ್ಆರ್ ಅನಾಲಿಟಿಕ್ಸ್ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 27 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 40 ವರ್ಷ ವಯಸ್ಸು ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಈ ಬ್ಯಾಂಕ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಬ್ಯಾಂಕ್ ಆಫ್ ಬರೋಡಾ ನಿಯಮಗಳ ಪ್ರಕಾರ, ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ ಮತ್ತು ಮಹಿಳಾ ಅಭ್ಯರ್ಥಿಗಳಿಗೆ : ರೂ.100/-
ಸಾಮಾನ್ಯ/ಇಡಬ್ಲ್ಯೂಎಸ್ ಮತ್ತು ಒಬಿಸಿ ಅಭ್ಯರ್ಥಿಗಳಿಗೆ : ರೂ.600/-
ಪಾವತಿ ವಿಧಾನ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಪ್ರಕಾರ, ಅಭ್ಯರ್ಥಿಗಳು ಈ ಹುದ್ದೆಗಳಿಗಾಗಿ ಆನ್‌ಲೈನ್ ಮೂಲಕ ತಮ್ಮ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಬ್ಯಾಂಕ್ ಆಫ್ ಬರೋಡಾ ನೇಮಕಾತಿ ಪ್ರಕಾರ, ಅರ್ಹ ಅಭ್ಯರ್ಥಿಗಳನ್ನು ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಬ್ಯಾಂಕ್ ಆಫ್ ಬರೋಡಾದಲ್ಲಿ ಖಾಲಿ ಇರುವ ಹುದ್ದೆಗಳ ಹುದ್ದೆವಾರು ಸಂಬಳದ (ವರ್ಷಕ್ಕೆ) ವಿವರ :
- ಡೈ. ರಕ್ಷಣಾ ಬ್ಯಾಂಕಿಂಗ್ ಸಲಹೆಗಾರ (DDBA) : ರೂ.1800000/-
- ರಕ್ಷಣಾ ಸಂಬಂಧ ನಿರ್ವಾಹಕ (DRM) : ರೂ.900000/-
- ಮುಖ್ಯ – ಎಚ್ಆರ್ ಅನಾಲಿಟಿಕ್ಸ್ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ, ಬ್ಯಾಂಕ್ ಆಫ್ ಬರೋಡಾ ನಿಯಮಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗುತ್ತದೆ.
- ಹಿರಿಯ ಮ್ಯಾನೇಜರ್ – ಎಚ್ಆರ್ ಅನಾಲಿಟಿಕ್ಸ್ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ, ಬ್ಯಾಂಕ್ ಆಫ್ ಬರೋಡಾ ನಿಯಮಗಳಿಗೆ ಅನುಸಾರವಾಗಿ ವೇತನ ಶ್ರೇಣಿಯನ್ನು ನಿಗದಿಪಡಿಸಲಾಗುತ್ತದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಫೆಬ್ರವರಿ 2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 02 ಮಾರ್ಚ್ 2023
ಇದನ್ನೂ ಓದಿ : Karnataka Bank Recruitment 2023 : ಕರ್ಣಾಟಕ ಬ್ಯಾಂಕ್ ನೇಮಕಾತಿ 2023 : ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಇದನ್ನೂ ಓದಿ : RCUB Recruitment 2023 : ರಾಣಿ ಚನ್ನಮ್ಮ ವಿವಿ ನೇಮಕಾತಿ : ಬೋಧಕೇತರ ಹುದ್ದೆಗೆ ಅರ್ಜಿ ಆಹ್ವಾನ
ಸೂಚನೆ : ಬ್ಯಾಂಕ್ ಆಫ ಬರೋಡಾ ನೇಮಕಾತಿಗೆ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಲು ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ ಆದ bankofbaroda.in ಮೂಲಕ ಪರಿಶೀಲಿಸಬಹುದಾಗಿದೆ.
Bank of Baroda Recruitment 2023 : Application Invitation for Various Posts