ಬೆಂಗಳೂರು : ರಾಜ್ಯದಲ್ಲಿ ಇಂದೂ ಕೂಡ ಕೊರೊನಾ ಮಹಾಸ್ಪೋಟ ಸಂಭವಿಸಿದೆ. ಅದ್ರಲ್ಲೂ ಕರಾವಳಿ ಜಿಲ್ಲೆಗಳಲ್ಲಿಯೇ ಅತೀ ಹೆಚ್ಚು ಸಂಖ್ಯೆಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಬರೊಬ್ಬರಿ 121 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಮಂದಿಗೆ ಸೋಂಕು ದೃಢಪಟ್ಟಿದೆ. ಅದ್ರಲ್ಲೂ ಯಾದಗಿರಿ ಜಿಲ್ಲೆಯಲ್ಲಿಂದು 103 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ರಾಜ್ಯದಲ್ಲಿಂದು ಬರೋಬ್ಬರಿ 378 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕೊರೊನಾ ಪೀಡಿತರ ಸಂಖ್ಯೆ ಬರೋಬ್ಬರಿ 5, 213ಕ್ಕೆ ಏರಿಕೆಯಾಗಿದೆ.

ಕೃಷ್ಣನಗರಿ ಉಡುಪಿ ಕೊರೊನಾ ಮಹಾಮಾರಿಯ ಆರ್ಭಟಕ್ಕೆ ತತ್ತರಿಸಿ ಹೋಗಿದೆ. ಜಿಲ್ಲೆಯಲ್ಲಿ ಇಂದೂ ಕೂಡ ಬರೋಬ್ಬರಿ 121 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ ಬರೋಬ್ಬರಿ 889ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇದುವರೆಗೂ 103 ಮಂದಿ ಕೊರೊನಾ ಸೋಂಕಿನಿಂದ ಗುಣುಮುಖರಾಗಿದ್ದರೆ, 785 ಮಂದಿ ಇಂದಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ನಿನ್ನೆ 200ರ ಗಡಿದಾಟಿದ್ದ ಕೊರೊನಾ ಸೋಂಕು ಇಂದು ಕೂಡ 100ರ ಗಡಿದಾಟಿದೆ. ಈ ಮೂಲಕ ಉಡುಪಿ ಕೊರೊನಾ ಪೀಡಿತರ ಸಂಖ್ಯೆಯಲ್ಲಿ ರಾಜ್ಯದಲ್ಲಿಯೇ ಅಗ್ರಸ್ಥಾನಕ್ಕೇರಿದೆ.

ಇನ್ನು ಯಾದಗಿರಿ ಜಿಲ್ಲೆಯೂ ಕೊರೊನ ಆರ್ಭಟ ಮುಂದುವರಿದಿದೆ. ಜಿಲ್ಲೆಯಲ್ಲಿಂದು 103 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 476ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿಯೇ ಮೂರನೇ ಸ್ಥಾನದಲ್ಲಿದೆ. ಇನ್ನು ಎರಡನೇ ಸ್ಥಾನದಲ್ಲಿರುವ ಕಲಬುರಗಿ ಜಿಲ್ಲೆಯಲ್ಲಿಯೂ ಕೊರೊನಾ ಪೀಡಿತರ ಸಂಖ್ಯೆ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿಂದು 69 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 621ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊಂಚ ಮಟ್ಟಿಗೆ ತಣ್ಣಗಾಗಿದ್ದ ಕಾವು ಇದೀಗ ನಿಧಾನಕ್ಕೆ ಏರಿಕೆಯನ್ನು ಕಾಣುತ್ತಿದೆ. ಜಿಲ್ಲೆಯಲ್ಲಿಂದು ಬರೋಬ್ಬರಿ 24 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಪೀಡಿತರ ಸಂಖ್ಯೆ 167ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 72 ಮಂದಿ ಬಿಡುಗಡೆಯಾಗಿದ್ದು, 88 ಮಂದಿ ಇಂದಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಲ್ಲಿನಲ್ಲಿಯೂ ಇಂದು 18 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, 452ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಳ್ಳುವ ಮೂಲಕ 4ನೇ ಸ್ಥಾನದಲ್ಲಿದೆ. ಇದುವರೆಗೂ ಬೆಂಗಳೂರಲ್ಲಿ 276 ಮಂದಿ ಬಿಡುಗಡೆಯಾಗಿದ್ದು, 162 ಮಂದಿ ಇಂದಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದ್ರೆ 13 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದು, ರಾಜ್ಯದ ಅಂಕಿಅಂಶಗಳ ಪೈಕಿ ಸಿಲಿಕಾನ್ ಸಿಟಿಯಲ್ಲಿಯೇ ಅತೀ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಉಳಿದಂತೆ ವಿಜಯಪುರ ಜಿಲ್ಲೆಯಲ್ಲಿ 6, ದಾವಣಗೆರೆಯಲ್ಲಿ 6, ಬೆಳಗಾವಿಯಲ್ಲಿ 5, ಗದಗ ಜಿಲ್ಲೆಯಲ್ಲಿ 4, ಹಾವೇರಿ 3, ಮಂಡ್ಯ 3, ಧಾರವಾಡ 3, ರಾಯಚೂರು 2, ಚಿಕ್ಕಬಳ್ಳಾಪುರ 2, ಉತ್ತರ ಕನ್ನಡ 2 ಹಾಗೂ ಕೋಲಾರ, ಕೊಪ್ಪಳ, ಬೀದರ್ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಇದೀಗ ಕೊರೊನಾ ಪೀಡಿತರ ಸಂಖ್ಯೆ 5,000ದ ಗಡಿದಾಟಿದೆ. ರಾಜ್ಯದಲ್ಲಿ 1968 ಮಂದಿ ಕೊರೊನಾ ಪೀಡಿತರು ಸೋಂಕಿನಿಂದ ಗುಣಮುಖರಾಗಿದ್ದರೆ, 3184 ಮಂದಿ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊರೊನಾ ಮಹಾಮಾರಿ ರಾಜ್ಯದಲ್ಲಿ ಬರೋಬ್ಬರಿ 59 ಮಂದಿಯನ್ನು ಬಲಿ ಪಡೆದಿದೆ.