ಅಡಿಕೆ ಧಾರಣೆ ಮಾರುಕಟ್ಟೆಯಲ್ಲಿ ಏರಿಕೆ : ಎಲ್ಲೆಲ್ಲಿ ಎಷ್ಟೆಷ್ಟು ಬೆಲೆ ?

ಬೆಂಗಳೂರು : ಕಳೆದೆರಡು ದಿನಗಳಲ್ಲಿ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆಧಾರಣೆಯಲ್ಲಿ ಬಾರಿ ಇಳಿಕೆ ಕಂಡಿತು. ಆದರೆ ರಾಜ್ಯದ ಕೆಲವು ಮಾರುಕಟ್ಟೆಗಳಲ್ಲಿ ಇಂದು (ಜನವರಿ 17)ರಂದು ಅಡಿಕೆ ಧಾರಣೆಯಲ್ಲಿ (Arecanut market rise) ಭರ್ಜರಿ ಏರಿಕೆ ಕಂಡಿದ್ದರೆ, ಇನ್ನುಳಿದ ಮಾರುಕಟ್ಟೆಗಳಲ್ಲಿ ಬೆಲೆಯಲ್ಲಿ ಕುಸಿತವಾಗಿದೆ. ಹೀಗಾಗಿ ರಾಜ್ಯದ ಕೆಲವು ಅಡಿಕೆ ಬೆಳೆಗಾರರಿಗೆ ಸಂತಸ ತಂದರೆ, ಇನ್ನುಳಿದ ಬೆಳೆಗಾರರಿಗೆ ಬೇಸರ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕರ್ನಾಟಕ ರೈತರ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ಅಡಿಕೆ(Arecanut)ಧಾರಣೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ರಾಜ್ಯದ ಹಲವೆಡೆ ಇರುವ ಮಾರುಕಟ್ಟೆಗಳಲ್ಲಿ ಅಡಿಕೆ ಬೆಲೆಗಳು ವಿಭಿನ್ನವಾಗಿರುತ್ತದೆ. ಅಲ್ಲದೆ ಪ್ರತಿ ದಿನವೂ ಬೆಲೆಗಳಲ್ಲಿ ಏರಿಳಿತವಾಗುತ್ತಿರುತ್ತದೆ. ರಾಜ್ಯದ ಅಡಿಕೆ ಮಾರುಕಟ್ಟೆಯಲ್ಲಿ ಉತ್ತರ ಕನ್ನಡಜಿಲ್ಲೆಯ ಯಲ್ಲಾಪುರದಲ್ಲಿಅಡಿಕೆ ಧಾರಣೆ 53,098 ರೂ. ದರದಲ್ಲಿ ವಹಿವಾಟು ನಡೆಸುತ್ತಿದ್ದು, ಕಳೆದೆರಡು ದಿನಗಳಿಗಿಂತ ಬೆಲೆಯಲ್ಲಿ ಭರ್ಜರಿ ಏರಿಕೆ ಕಂಡಿದೆ. ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಬೆಲೆ ಎಷ್ಟಿದೆ ಎನ್ನುವುದನ್ನು ಈ ಕೆಳಗೆ ತಿಳಿಸಲಾಗಿದೆ.

ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಅಡಿಕೆಧಾರಣೆ ವಿವರ :

  • ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ರಾಶಿ ಅಡಿಕೆ 41,119 ರೂ.
  • ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ರಾಶಿ ಅಡಿಕೆ 46,499 ರೂ.
  • ದಾವಣಗೆರೆ ಜಿಲ್ಲೆಯಲ್ಲಿ ರಾಶಿ ಅಡಿಕೆ 45,571 ರೂ.
  • ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ರಾಶಿ ಅಡಿಕೆ 46,199 ರೂ.
  • ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ರಾಶಿ ಅಡಿಕೆ 46,299 ರೂ.
  • ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ರಾಶಿ ಅಡಿಕೆ 46,508 ರೂ.
  • ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ರಾಶಿ ಅಡಿಕೆ 53,098 ರೂ.
  • ದಕ್ಷಿಣ ಕನ್ನಡದ ಯಲ್ಲಾಪುರದಲ್ಲಿ ಹಳೆ ಅಡಿಕೆಗೆ 48,000 – 54,500 ರೂ.
  • ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ಕೋಕ ಅಡಿಕೆಗೆ 12,500 – 25,000 ರೂ.
  • ದಕ್ಷಿಣ ಕನ್ನಡದ ಮಂಗಳೂರಿನಲ್ಲಿ ಹೊಸ ಅಡಿಕೆಗೆ 25,876 -31,000 ರೂ.
  • ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಕೋಕ ಅಡಿಕೆಗೆ 11,000 – 26,000 ರೂ.
  • ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಹೊಸ ಅಡಿಕೆಗೆ 32,000 – 38,000 ರೂ.
  • ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ರಾಶಿ ಅಡಿಕೆ 45,899 ರೂ.
  • ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ರಾಶಿ ಅಡಿಕೆ 46,419 ರೂ.
  • ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ರಾಶಿ ಅಡಿಕೆ 46,329 ರೂ.
  • ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ರಾಶಿ ಅಡಿಕೆ 45,900 ರೂ.
  • ಶಿವಮೊಗ್ಗ ಜಿಲ್ಲೆಯಲ್ಲಿ ರಾಶಿ ಅಡಿಕೆ 46,299 ರೂ.
  • ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ರಾಶಿ ಅಡಿಕೆ 46,899 ರೂ.
  • ತುಮಕೂರು ಜಿಲ್ಲೆಯಲ್ಲಿ ರಾಶಿ ಅಡಿಕೆ 45,900 ರೂ.

ಇದನ್ನೂ ಓದಿ : Arecanut Price Decrease : ಅಡಿಕೆ ಬೆಲೆ ಕುಸಿತ, ಅತಂಕದಲ್ಲಿ ಬೆಳೆಗಾರರು

ಇದನ್ನೂ ಓದಿ : ಅಡಿಕೆ ಬೆಳೆಗಾರರಿಗೆ ಕಹಿ ಸುದ್ಧಿ : ಮಾರುಕಟ್ಟೆಯಲ್ಲಿ ಮತ್ತೆ ಇಳಿಕೆ ಕಂಡ ಅಡಿಕೆ ಬೆಲೆ

Arecanut market rise: Rise in the arecanut storage market: How much is the price everywhere?

Comments are closed.