GOOD NEWS : ರೈತರಿಗೆ ಸಿಹಿ ಸುದ್ದಿಕೊಟ್ಟ ರಾಜ್ಯ ಸರಕಾರ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಕೃಷಿ ಯೋಜನೆ

ಬೆಳಗಾವಿ : ಕರ್ನಾಟಕ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಲು ಮುಂದಾಗಿದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ರೈತರೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತರ ಮನೆ ಬಾಗಿಲಿಗೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಸಂಬಂಧಿ ಯೋಜನೆಗಳನ್ನು ತಲುಪಿಸುವ ಚಿಂತನೆ ನಡೆಸಲಾಗಿದ್ದು, ಮುಂದಿನ ದಿನಗಳಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: PM KISAN : ರೈತರಿಗೆ ಗುಡ್‌ನ್ಯೂಸ್‌ : ಪಿಎಂ ಕಿಸಾನ್‌ ಯೋಜನೆಯಡಿ 6 ಸಾವಿರದ ಬದಲು ಸಿಗುತ್ತೆ12 ಸಾವಿರ ರೂ.

ಗ್ರಾಮೀಣಾ ಪ್ರದೇಶಗಳಲ್ಲಿ ಗ್ರಾಮ ಸೇವೆಕರ ಮೂಲಕ ರೈತರ ಮನೆ ಬಾಗಿಲಿಗೆ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ತಲುಪಿಸುವ ಕೆಲಸಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದ್ದಾರೆ. ಈ ಯೊಜನೆಯಿಂದ ರೈತರಿಗೆ ಅಗತ್ಯ ಮಾಹಿತಿಗಳು ಸಿಗುತ್ತವೆ.

ಇದನ್ನೂ ಓದಿ: Arecanut : ಅಡಿಕೆಗೆ ಬಂಪರ್‌ ಬೆಲೆ : 50 ಸಾವಿರ ರೂಪಾಯಿ ದಾಟಿದ ಅಡಿಕೆ

(State government giving sweet news to farmers: farm project coming home)

Comments are closed.