Farmers Crop Survey App : ಬೆಳೆ ಸಮೀಕ್ಷೆಗೆ ಬಂದಿದೆ ರೈತ ಸ್ನೇಹಿ ಆ್ಯಪ್

Farmers Crop Survey App : ನನ್ನ ಬೆಳೆ ನನ್ನ ಹಕ್ಕು ಎನ್ನುವ ಧ್ಯೇಯ ವಾಕ್ಯದೊಂದಿಗೆ ರಾಜ್ಯ ಸರ್ಕಾರ 2022ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯ ಪ್ರಾರಂಭವಾಗಿದ್ದು, ರೈತರಿಂದಲೇ ತಮ್ಮ ತೋಟ, ಹೊಲಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿಪಡಿಸಿ ಕೃಷಿ ಇಲಾಖೆ ಚಾಲನೆ ಕೊಟ್ಟಿದೆ. ರೈತರು ತಮ್ಮ ಜಮೀನಿನಲ್ಲಿ ಬೆಳೆದಿರುವ ಎಲ್ಲಾ ಬೆಳೆಗಳ ವಿವರಗಳನ್ನು ತಾವೇ ಸ್ವತಃ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.ದೇಶದಲ್ಲಿಯೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರವು ಈ ಯೋಜನೆಯನ್ನು ಆರಂಭಿಸಿದೆ. ಬೆಳೆ ಸಮೀಕ್ಷೆ ಮಾಡಲು ರೈತರು ಈಗ ಎಲ್ಲಿಯೂ ಹೋಗಬೇಕಿಲ್ಲ. ಸ್ವತಃ ರೈತರೇ ತಮ್ಮ ಮೊಬೈಲ್ ಮೂಲಕ ಸಮೀಕ್ಷೆ ಮಾಡಬಹುದು.

ಮೊಬೈಲ್ ನಲ್ಲೇ ಬೆಳೆ ಸಮೀಕ್ಷೆ ಹೇಗೆ ಮಾಡಬೇಕು?

ರೈತರು ತಮ್ಮ ಮೊಬೈಲ್‌ಗಳಲ್ಲಿ ‘ಖಾರಿಫ್ ಸೀಸನ್ ಫಾರ್ಮರ್ ಕ್ರಾಪ್ ಸರ್ವೆ 2021-22’ (Kharif Farmer Crop Survey) ಎಂಬ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ತಮ್ಮ ಆಂಡ್ರಾಯ್ಡ್ ಮೊಬೈಲ್‌ನ ಗೂಗಲ್ ಪ್ಲೇಸ್ಟೋರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬೇಕು.ನಂತರ ಮುಂಗಾರು ರೈತರ ಬೆಳೆ ಸಮೀಕ್ಷೆ 2021-22 ಚಿತ್ರ ಕಾಣುತ್ತದೆ. ಆ್ಯಪ್‌ನಲ್ಲಿ ಆರ್ಥಿಕ ವರ್ಷ (2021-22) ಹಾಗೂ ಋತು (ಮುಂಗಾರು) ಎಂದು ಆಯ್ಕೆ ಮಾಡಬೇಕು. ಆಧಾರ್ ಕಾರ್ಡ್ ಬಾರ್ ಕೋಡ್ ಸ್ಕ್ಯಾನ್ ಮಾಡಬಹುದು. ಆಧಾರ್ ಸಂಖ್ಯೆ, ಆಧಾರ್ ಕಾರ್ಡ್ ನಲ್ಲಿರುವಂತೆ ಹೆಸರು, ಹುಟ್ಟಿದ ದಿನಾಂಕ, ವಿಳಾಸ, ಮೊಬೈಲ್ ಸಂಖ್ಯೆ, ಲಿಂಗ, ನಮೂದಿಸಿ ಸಕ್ರಿಯಗೊಳಿಸಿದ ಬಳಿಕ ರೈತರು ನಮೂದಿಸಿದ ಮೊಬೈಲ್ ಸಂಖ್ಯೆಗೆ ಒನ್ ಟೈಮ್ ಪಾಸ್ವರ್ಡ್ (OTP) ಬರುತ್ತದೆ. ಆ ಓಟಿಪಿ ಸಂಖ್ಯೆಯನ್ನು ದಾಖಲಿಸಿ ನೋಂದಣಿಗೆ ಸಲ್ಲಿಸಬೇಕು.

ಮೊಬೈಲ್ ಆ್ಯಪ್‌ನಲ್ಲಿ ನೋಂದಣಿ ಮಾಡಿಕೊಂಡ ನಂತರ ಮೊದಲು ರೈತರ ಜಮೀನು ಇರುವ ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಗ್ರಾಮದ ಹೆಸರನ್ನು ನಮೂದಿಸಬೇಕು. ಆ ನಂತರ, ಕೃಷಿ ಬೆಳೆ ಬೆಳೆದಿರುವ ಸರ್ವೇ ನಂಬರ್, ಹಿಸ್ಸಾ ಹಾಗೂ ಹೊಲದ ಮಾಲೀಕರ ಹೆಸರು ಆಯ್ಕೆ ಮಾಡಬೇಕು. ಬಳಿಕ ಅಲ್ಲಿ ನಮೂದಿಸಲಾಗಿರುವ ಸರ್ವೇ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ಕ್ಷೇತ್ರವನ್ನು ನಮೂದಿಸಿ, ಬೆಳೆಯ ಫೋಟೊ ತೆಗೆದು ಮಾಹಿತಿಯನ್ನು ಅಪ್ ಲೋಡ್ ಮಾಡಬೇಕು.

ಏನಿದು ಬೆಳೆ ಸಮೀಕ್ಷೆ?

ಸರ್ವೆ ನಂಬರ್, ಹಿಸ್ಸಾ ನಂಬರ್ ವಾರು ಬೆಳೆ ಮಾಹಿತಿ ಸಂಗ್ರಹ ಹಾಗೂ ನಿಖರ ದತ್ತಾಂಶದ ಕೊರತೆ ನಿವಾರಿಸಲು ಸರ್ಕಾರವು 2018 ರಲ್ಲಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ರೈತರೇ ತಾವು ಬೆಳೆದ ಬೆಳೆಯ ಮಾಹಿತಿಯನ್ನು ಛಾಯಾ ಚಿತ್ರ ಸಹಿತ ದಾಖಲಿಸಿ, ಅಪ್ಲೋಡ್ ಮಾಡಿ ಸರ್ಕಾರದ ಬೆಳೆ ಪರಿಹಾರವನ್ನು ತೆಗೆದು ಕೊಳ್ಳಬಹುದು.

ಬೆಳೆ ಸಮೀಕ್ಷೆ ಉಪಯೋಗ:

ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ ಹಾಗೂ ಪಹಣಿಯಲ್ಲಿ ಎಲ್ಲಾ ಬೆಳೆ ವಿವರ ದಾಖಲಿಸಲು ಬಳಸಲಾಗುತ್ತದೆ. ಹಾಗೂ ನಿಖರ ದತ್ತಾಂಶದ ಕೊರತೆ ನಿವಾರಿಸಲು ಸರ್ಕಾರವು 2018 ರಲ್ಲಿ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದೆ. ರೈತರೇ ತಾವು  ಬೆಳೆದ ಬೆಳೆಯ  ಮಾಹಿತಿಯನ್ನು ಛಾಯಾ ಚಿತ್ರ ಸಹಿತ ದಾಖಲಿಸಿ, ಅಪ್ಲೋಡ್ ಮಾಡಿದರೆ  ಸರ್ಕಾರದಿಂದ ಬರುವ ಬೆಳೆ ಪರಿಹಾರವನ್ನು ತೆಗೆದು ಕೊಳ್ಳಬಹುದು. ಆ್ಯಪ್ ಮೂಲಕ ಮಾಹಿತಿಯನ್ನು ಹಂಚಿಕೊಳ್ಳದೇ ಹೋದಲ್ಲಿ ಪರಿಹಾರ ವಿತರಣೆ ಸಮಯದಲ್ಲಿ ನಷ್ಟ ಅನುಭವಿಸಬೇಕಾಗುತ್ತದೆ.

ರೈತರೇನು ಮಾಡಬೇಕು?

ರೈತರು ಸರ್ವೆ ನಂಬರ್ ಗಡಿಯೊಳಗೆ ನಿಂತು ಬೆಳೆ ವಿವರ ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್ಲೋಡ್ ಮಾಡಬೇಕು. ಈ ಪ್ರಕಾರ ದಾಖಲಿಸಿರುವ ಮಾಹಿತಿಯನ್ನು ಮೇಲ್ವಿಚಾರಕರ ಪರಿಶೀಲನೆಗೊಳಪಟ್ಟು ಸರಿ ಇದ್ದರೆ ಅವರಿಗೆ ಪರಿಹಾರವನ್ನು ನೀಡುತ್ತಾರೆ. ಕೃಷಿ ಚಟುವಟಿಕೆ ನಡೆಸುವ ರೈತರು ಕೂಡಲೇ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಸುಲಭವಾಗಿ ಸರಕಾರದ ಜೊತೆಗೆ ಹಂಚಿಕೊಂಡು ಸರ್ಕಾರ ನೀಡುವ ಸಹಾಯಧನವನ್ನೂ ಪರಿಹಾರವನ್ನು ಸದುಪಯೋಗ ಪಡಿಸಿಕೊಳ್ಳಬೇಕು.

ಒಂದು ವೇಳೆ  ಈ ಆಂಡ್ರಾಯ್ಡ್ ಫೋನ್ ಇಲ್ಲವೆಂದರೆ ಅಥವಾ ಆ್ಯಪ್ ಬಲಸಲಿಕ್ಕೆ ಬರದೆ ಹೋದರೆ ಮನೆಯಲ್ಲಿನ ಕುಟುಂಬ ಸದಸ್ಯರಿಂದ ಬೆಳೆ ಸಮೀಕ್ಷೆ ಮಾಡಿಸಿಕೊಳ್ಳಬಹುದು, ಇಲ್ಲದಿದ್ದರೆ ಕೃಷಿ ತೋಟಗಾರಿಕೆ ಮತ್ತು ಕಂದಾಯ ಇಲಾಖೆಯನ್ನು ಸಂಪರ್ಕಿಸಿ ಅವರ ಸಹಾಯ ಪಡೆದುಕೊಂಡು ತಾವು ಬೆಳೆದ ಬೆಳೆಗಳ ವಿವರಗಳ ಕುರಿತಂತೆ ಒಪ್ಪಿಗೆ ಪತ್ರಗಳನ್ನು ಒದಗಿಸಿ ಅವರ ಸಹಾಯದಿಂದ ಬೆಳೆ ಸಮೀಕ್ಷೆ ಮಾಡಿಸಿಕೊಳ್ಳಬೇಕು. ಬೆಳೆ ಸಮೀಕ್ಷೆ ಪ್ರತಿಯೊಬ್ಬ ಅನ್ನದಾತನ ಹಕ್ಕಾಗಿದ್ದು, ಅದನ್ನ ಎಲ್ಲರೂ ಸದುಪಯೋಗ ಮಾಡಿಕೊಳ್ಳಬೇಕು.

ಇದನ್ನೂ ಓದಿ: Guru Purnima: ಗುರು ಪೂರ್ಣಿಮೆ ಮಹತ್ವ

ಇದನ್ನೂ ಓದಿ: populous country : 2023ರಲ್ಲಿ ಚೀನಾದ ಜನಸಂಖ್ಯೆಯನ್ನು ಹಿಂದಿಕ್ಕಲಿದೆ ಭಾರತ : ವಿಶ್ವಸಂಸ್ಥೆ ಮಾಹಿತಿ

(Karnataka Farmers Crop Survey App)

Comments are closed.