PM KISAN : ರೈತರಿಗೆ ಗುಡ್‌ನ್ಯೂಸ್‌ : ಪಿಎಂ ಕಿಸಾನ್‌ ಯೋಜನೆಯಡಿ 6 ಸಾವಿರದ ಬದಲು ಸಿಗುತ್ತೆ12 ಸಾವಿರ ರೂ.

ನವದೆಹಲಿ : ಅನ್ನದಾತರಿಗೆ ಉತ್ತೇಜನ ನೀಡುವ ಸಲುವಾಗಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಪಿಎಂ ಕಿಸಾನ್‌ ಸಮ್ಮಾನ್‌ ನಿಧಿ ಯೋಜನೆಯಡಿ ರೈತರಿಗೆ ವರ್ಷಕ್ಕೆ 6 ಸಾವಿರ ರೂಪಾಯಿ ನೀಡಲಾಗುತ್ತಿತ್ತು. ಆದ್ರೀಗ ಕೇಂದ್ರ ಸರಕಾರ ಸೌಲಭ್ಯವನ್ನು ದ್ವಿಗುಣ ಮಾಡಲು ಮುಂದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅಧಿಕಾರ ಸ್ವೀಕಾರ ಮಾಡುತ್ತಲೇ ಪಿಎಂ ಕಿಸಾನ್‌ ಯೋಜನೆಯನ್ನು ಘೋಷಣೆ ಮಾಡಿದ್ದರು. ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡುವ ಯೋಜನೆಯನ್ನು ಜಾರಿಗೆ ತಂದಿದ್ದು, ಈಗಾಗಲೇ ಲಕ್ಷಾಂತರ ರೈತರು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ವರ್ಷದಲ್ಲಿ 6 ಸಾವಿರ ರೂಪಾಯಿಯನ್ನು ಪಡೆಯುತ್ತಿದ್ದಾರೆ. ಆದರೆ ಕೇಂದ್ರ ಸರಕಾರ ತಿಂಗಳಿಗೆ ಒಂದು ಸಾವಿರ ರೂಪಾಯಿಯಂತೆ ವರ್ಷಕ್ಕೆ 12 ಸಾವಿರ ನೀಡಲು ಚಿಂತನೆ ನಡೆಸಿದ್ದಾರೆ.

ಕೃಷಿ ಸಚಿವ ನರೇಂದ್ರ ತೋಮರ್‌ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಈ ಪಿಎಂ ಕಿಸಾನ್‌ ಯೋಜನೆಯಡಿಯಲ್ಲಿ ಹಣ ದ್ವಿಗುಣಗೊಳಿಸುವ ಕುರಿತು ಚರ್ಚೆ ನಡೆಸಿದ್ದಾರೆ. ಪಿಎಂ ಕಿಸಾನ್‌ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸುವವರು ಪಿಎಂ ಕಿಸಾನ್‌ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮಾಹಿತಿಯನ್ನು ಪಡೆಯಬಹುದಾಗಿದೆ. ಅಲ್ಲದೇ ಸ್ಥಳೀಯ ಗ್ರಾಮ ಪಂಚಾಯತ್‌ ಅಥವಾ ಸೇವಾ ಕೇಂದ್ರಗಳನ್ನು ಭೇಟಿ ಮಾಡಬಹುದಾಗಿದೆ.

ಇದನ್ನೂ ಓದಿ : ಭರ್ಜರಿ ಏರಿಕೆ ಕಂಡ ಅಡಿಕೆ ಬೆಲೆ ! ಬೆಳೆಗಾರರು ಪುಲ್‌ ಖುಷ್‌

ಇದನ್ನೂ ಓದಿ : ರೈತರಿಗೆ ಗುಡ್ ನ್ಯೂಸ್ ಕೊಟ್ಟ ಪ್ರಧಾನಿ ಮೋದಿ : ಅನ್ನದಾತರ ಖಾತೆಗಳಿಗೆ 19 ಸಾವಿರ ಕೋಟಿ

Comments are closed.