ಭಾರತಕ್ಕೆ ಬರಲಿದೆ Hyundai Ioniq 5 ಮತ್ತು Kia EV6 ಎಲೆಕ್ಟ್ರಿಕ್ ಕಾರುಗಳು

ದುಬಾರಿಯಾಗಿರುವ ಇಂಧನಗಳ ಬೆಲೆ ಮತ್ತು ಮಾಲಿನ್ಯದ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಹೆಚ್ಚಿನ ಪ್ರೋತ್ಸಾಹ ಧನ ಘೋಷಿಸಿರುವುದು ಹೊಸ ಬದಲಾವಣೆಗೆ ಕಾರಣವಾಗಿದೆ. ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಿದ ಪರಿಣಾಮ ಸಾಂಪ್ರಾದಾಯಿಕ ವಾಹನ ಉತ್ಪಾದನಾ ಕಂಪನಿಗಳ ಜೊತೆ ಸ್ಟಾರ್ಟ್ ಅಪ್ ಕಂಪನಿಗಳು ಕೂಡಾ ವಿವಿಧ ಇವಿ ವಾಹನಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ.

ಉತ್ತರ ಕೊರಿಯಾದ ಹ್ಯುಂಡೈ ಮತ್ತು ಕಿಯಾ ಕಂಪನಿಗಳು ಭಾರತದಲ್ಲಿ ಹೊಸ ಮಾದರಿಯ ಇವಿ ಮಾದರಿಗಳನ್ನು ಬಿಡುಗಡೆಗೊಳಿಸುವ ಯೋಜನೆ ರೂಪಿಸಿವೆ. ಹ್ಯುಂಡೈ ಕಂಪನಿಯು ಈಗಾಗಲೇ ಭಾರತದಲ್ಲಿ ಕೊನಾ ಎಲೆಕ್ಟ್ರಿಕ್ ಕಾರು ಮಾದರಿಯ ಮೂಲಕ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಐಷಾರಾಮಿ ಕಾರು ಮಾದರಿಗಳ ಖರೀದಿ ಬಯಸುವ ಗ್ರಾಹಕರಿಗಾಗಿ ಐಯಾನಿಕ್ 5(Ioniq 5) ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಇದನ್ನೂ ಓದಿ: Hybrid Flying Car: ರಸ್ತೆಗುಂಡಿ, ಟ್ರಾಫಿಕ್ ಕಿರಿ ಕಿರಿಯೇ ಇಲ್ಲ: ಸದ್ಯದಲ್ಲೇ ಬರಲಿದೆ ಹಾರುವ ಕಾರು

ಇದರೊಂದಿಗೆ ಭಾರತದಲ್ಲಿ ಸೊಲ್ ಎಲೆಕ್ಟ್ರಿಕ್ ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಕಿಯಾ ಇಂಡಿಯಾ ಕಂಪನಿಯು ಐಷಾರಾಮಿ ಕಾರು ಮಾದರಿಗಳ ವಿಭಾಗಕ್ಕೆ ಇವಿ6 (EV6) ಮಾದರಿಗಳನ್ನು ಭಾರತದಲ್ಲಿ ಪರಿಚಯಿಸುವ ಕುರಿತು ಮಾರುಕಟ್ಟೆಯ ಅಧ್ಯಯನ ನಡೆಸಿದೆ. ಹ್ಯುಂಡೈ ಐಯಾನಿಕ್ 5 ಮತ್ತು ಕಿಯಾ ಇವಿ6 ಕಾರು ಮಾದರಿಗಳು ಈಗಾಗಲೇ ಯುಎಸ್‌ಎ ಮತ್ತು ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟಗೊಳ್ಳುತ್ತಿದ್ದು, ಮುಂದಿನ ಎರಡು ವರ್ಷಗಳಲ್ಲಿ ಈ ಕಾರು ಜಗತ್ತಿನ ಪ್ರಮುಖ ರಾಷ್ಟ್ರಗಳಲ್ಲಿ ಬಿಡುಗಡೆಯಾಗುವ ಸಿದ್ದತೆಯಲ್ಲಿವೆ.

ಹೊಸ ಕಾರು 400ವಿ ಮತ್ತು 800ವಿ ಸೂಪರ್ ಫಾಸ್ಟ್ ಚಾರ್ಜಿಂಗ್ ಸರ್ಪೋಟ್ ಹೊಂದಿದೆ. ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 480 ಕಿ.ಮೀ ಮೈಲೇಜ್ ನೀಡಲಿದ್ದು, ಸೂಪರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಪ್ರಮಾಣ ಚಾರ್ಜ್ ಮಾಡಬಹುದಾಗಿದೆ. ಸೂಪರ್ ಫಾಸ್ಟ್ ಚಾರ್ಜರ್ ಮೂಲಕ ಕೇವಲ 5 ನಿಮಿಷ ಚಾರ್ಜ್ ‌ಮಾಡಿದರೆ 112 ಕಿ.ಮೀ ಮೈಲೇಜ್ ಪಡೆದುಕೊಳ್ಳಬಹುದಾಗಿದ್ದು, 18 ನಿಮಿಷ ಚಾರ್ಜ್ ಮಾಡಿದ್ದಲ್ಲಿ 330 ಕಿ.ಮೀ ಮೈಲೇಜ್ ಪಡೆದುಕೊಳ್ಳ ಬಹುದಾಗಿದೆ. ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಮಾಡಲು 50 ನಿಮಿಷ ಕಾಲ ಸಮಯಾವಕಾಶ ತೆಗೆದುಕೊಳ್ಳಲಿದ್ದು, ಪೂರ್ಣ ಪ್ರಮಾಣದಲ್ಲಿ ಚಾರ್ಜ್ ಆದಲ್ಲಿ 480 ಕಿ.ಮೀ ಮೈಲೇಜ್ ಹಿಂಪಡೆಯಬಹುದಾಗಿದೆ.

ಇದನ್ನೂ ಓದಿ: Ola electric scooter : 2 ದಿನದಲ್ಲಿ 1,100 ಕೋಟಿ ಮೌಲ್ಯದ ಓಲಾ ಎಲೆಕ್ಟ್ರಿಕ್ ಸ್ಕೂಟರ್‌ ಮಾರಾಟ

ಐಯಾನಿಕ್ 5 ಕಾರು ಮಾದರಿಯು 4635 ಎಂಎಂ ಉದ್ದ, 1890 ಎಂಎಂ ಅಗಲ, 1605 ಎಂಎಂ ಎತ್ತರ ಮತ್ತು 3000 ಎಂಎಂ ವೀಲ್‌ಬೇಸ್‌ನೊಂದಿಗೆ ವಿಶಾಲವಾದ ಕ್ಯಾಬಿನ್ ಹೊಂದಿದೆ, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 58 ಕಿ.ವ್ಯಾ ಮತ್ತು 72.6 ಕಿ.ವ್ಯಾ ಬ್ಯಾಟರಿ ಪ್ಯಾಕ್ ಜೋಡಣೆ ಹೊಂದಿದೆ. ಐಯಾನಿಕ್ 5 ಕಾರು ಬ್ಯಾಟರಿ ಪ್ಯಾಕ್ ಆಧಾರದ ಪ್ರತಿ ಚಾರ್ಜ್‌ಗೆ ಗರಿಷ್ಠ 470-480 ಕಿ.ಮೀ ಮೈಲೇಜ್ ಹಿಂದಿಗಿರುಗಿಸಲಿದೆ. ಆಧುನಿಕ ತಂತ್ರಜ್ಞಾನ ಪ್ರೇರಿತ ಚಾರ್ಜಿಂಗ್ ಸೌಲಭ್ಯದೊಂದಿಗೆ ಕೇವಲ 5 ನಿಮಿಷಗಳ ಕಾಲ ಚಾರ್ಜ್ ಮಾಡಿದರೂ 100 ಕಿ.ಮೀ ಮೈಲೇಜ್ ಸೌಲಭ್ಯವನ್ನು ಪಡೆದು ಕೊಳ್ಳಬಹುದಾಗಿದೆ.

(Coming to India are Hyundai Ioniq 5 and Kia EV6 electric cars)

Comments are closed.