HSRP Number Plate Implementation Deadline : ಬೆಂಗಳೂರು: ಕರ್ನಾಟಕದಲ್ಲಿ ಎಚ್ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವ ಕುರಿತಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ರಾಜ್ಯ ಸರಕಾರ ಈಗಾಗಲೇ ಎಚ್‌ಎಸ್‌ಆರ್‌ಪಿ ನಂಬರ್ (HSRP Number Plate) ಪ್ಲೇಟ್ ಅಳವಡಿಕೆ ಮಾಡುವ ಅವಧಿಯನ್ನು ಸೆಪ್ಟೆಂಬರ್ 15ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ಕರ್ನಾಟಕ ಹೈಕೋರ್ಟ್ ನ ಹೆಚ್ಚುವರಿ ಅಡ್ವೋಕೇಟ್ ಜನರಲ್ ವಿಕ್ರಮ್ ಹುಯಿಲಗೋಳ, ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ನ್ಯಾಯಪೀಠದ ಮುಂದೆ ಹಾಜರಾಗಿರುವ ರಾಜ್ಯ ಸರಕಾರ ಈ ಮಾಹಿತಿಯನ್ನು ಹಂಚಿಕೊಂಡಿದೆ.

ಎಚ್ಎಸ್ಆರ್ಪಿ ಅಳವಡಿಸಿಕೊಳ್ಳಲು ನಿಗದಿಪಡಿಸಲಾಗಿದ್ದ ಅವಧಿಯನ್ನು ಇದೀಗ ಸರಕಾರ ಸೆಪ್ಟಂಬರ್ 15ರವರೆಗೆ ವಿಸ್ತರಿಸಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿಯನ್ನು ನೀಡಿದೆ. ಈ ಮೂಲಕ ಕರ್ನಾಟಕದಲ್ಲಿ ಸಾರಿಗೆ ಇಲಾಖೆ ನಾಲ್ಕನೇ ಬಾರಿಗೆ ಎಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಣೆ ಮಾಡಿದೆ.
ಇದನ್ನೂ ಓದಿ : Ola S1 X : 3 ಬ್ಯಾಟರಿ ಆಯ್ಕೆ, ಕೇವಲ 69,999ರೂ.ಗೆ ಓಲಾ ಎಸ್1 ಎಕ್ಸ್
ಕರ್ನಾಟಕದಲ್ಲಿ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡುವ ಕುರಿತು ಮೊದಲ ಬಾರಿಗೆ ನವೆಂಬರ್ 17, 2023ರಂದು ಗಡುವು ವಿಸ್ತರಣೆ ಮಾಡಲಾಗಿತ್ತು. ನಂತರದಲ್ಲಿ ಫೆಬ್ರವರಿ 17, 2024 ಮತ್ತು ಮೇ 17, 2024 ಗಡುವು ವಿಸ್ತರಿಸಲಾಗಿದೆ. ಮುಂದಿನ ಅವಧಿಯ ಒಳಗಾಗಿ ವಾಹನ ಮಾಲೀಕರು ತಮ್ಮ ವಾಹನಗಳಿಗೆ HSRP ಅಳವಡಿಸದೇ ಇದ್ದಲ್ಲಿ, ಬಾರೀ ದಂಡ ವಿಧಿಸಲು ಸರಕಾರ ಯೋಜನೆ ರೂಪಿಸಿದೆ.
2019ರ ಏಪ್ರಿಲ್ 1ಕ್ಕೆ ಮೊದಲು ಕರ್ನಾಟಕದಲ್ಲಿ ನೋಂದಣಿ ಆಗಿರುವ ಎಲ್ಲಾ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ಕಡ್ಡಾಯ ವಾಗಿದೆ. ಹಳೆಯ ವಾಹನಗಳಿಗೆ ಅತೀ ಸುರಕ್ಷತೆಯ ದೃಷ್ಟಿಯಿಂದ ಎಚ್‌ಎಸ್‌ಆರ್‌ಪಿ ನೋಂದಣಿ ಫಲಕವನ್ನು ಅಳವಡಿಕೆ ಮಾಡಲಾಗುತ್ತಿದೆ. ಆದರೆ 2019ರ ನಂತರದಲ್ಲಿ ನೋಂದಣಿ ಆಗಿರುವ ವಾಹನಗಳಿಗೆ ಈ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗುತ್ತಿದೆ.
ಇದನ್ನೂ ಓದಿ : ಕೇವಲ 21,000ಕ್ಕೆ ಬುಕ್ ಮಾಡಿ ಟಾಟಾ ಟಿಯಾಗೋ, ಟಾಟಾ ಟಿಗರ್ CNG AMT
HSRP ಆನ್‌ಲೈನ್ ಮೂಲಕ ಖರೀದಿಸುವುದು ಹೇಗೆ ?
- ಸಾರಿಗೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಮಾಡಬೇಕು.
- ಎಚ್‌ಎಸ್‌ಆರ್‌ಪಿ ಮೇಲೆ ಕ್ಲಿಕ್ ಮಾಡಿ
- ವಾಹನದ ಸಂಪೂರ್ಣ ವಿವರ ಭರ್ತಿ ಮಾಡಿ
- ನಂಬರ್ ಪ್ಲೇಟ್ ಅಳವಡಿಕೆಗೆ ಯಾವ ಸ್ಥಳ ಬೇಕು ಎಂದು ಆಯ್ದುಕೊಳ್ಳಬೇಕು
- ನಿಗದಿತ ದಿನಾಂಕದಂದು ನಿಮ್ಮ ವಾಹನಕ್ಕೆ HSRP ನಂಬರ್ ಪ್ಲೇಟ್ ಅಳವಡಿಸಬಹುದಾಗಿದೆ.
ಇದನ್ನೂ ಓದಿ : ಮಹಿಳೆಯರಿಗೆ ಸಿಗಲಿದೆ 5000 ರೂ. ; ಹೊಸ ಯೋಜನೆ ಘೋಷಿಸಿದ ಪ್ರಧಾನ ನರೇಂದ್ರ ಮೋದಿ
HSRP Number Plate Implementation Deadline : Important Information from Karnataka High Court news in Kannada