ಮಾರಾಟದಲ್ಲಿ ಹೊಸ ದಾಖಲೆ ಬರೆದ ಮಾರುತಿ ಸುಜುಕಿ ವಿಟಾರಾ ಬ್ರೆಝಾ

0

ಭಾರತದ ಗ್ರಾಹಕರ ಮನಗೆದ್ದಿರುವ ಮಾರುತಿ ಸುಜುಕಿ ವಿಟಾರಾ ಬ್ರೀಝಾ ಆವೃತ್ತಿಯ ಎಸ್ ಯುವಿ ಕಾರು ಅತೀ ಕಡಿಮೆ ಅವಧಿಯಲ್ಲಿ ದಾಖಲೆಯ ಪ್ರಮಾಣದಲ್ಲಿ ಮಾರಾಟವಾಗಿದೆ. ಬಿಡುಗಡೆಯಾದ 55 ತಿಂಗಳ ಅವಧಿಯಲ್ಲಿ ಬರೋಬ್ಬರಿ 5.50 ಲಕ್ಷ ಯೂನಿಟ್ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ.

2016ರ ಮಾರ್ಚ್ 8ರಂದು ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದ್ದ ವಿಟಾರಾ ಬ್ರೆಝಾ ಕಾರು ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಯೊಂದಿಗೆ ಗ್ರಾಹಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಪ್ರತಿ ತಿಂಗಳು ಸರಾಸರಿ 13 ಸಾವಿರದಿಂದ 15 ಸಾವಿರ ಯುನಿಟ್ ಮಾರಾಟಗೊಳ್ಳುವ ಮೂಲಕ ಇದೀಗ 5.50 ಲಕ್ಷ ಯುನಿಟ್ ಮಾರಾಟ ಗುರಿತಲುಪಿದೆ.

ಮಾರುತಿ ಸುಜುಕಿ ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕೂಡಾ ಒಂದಾಗಿದ್ದು, ಬಿಡುಗಡೆಯಾದ ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ ಮಾರಾಟಗೊಳ್ಳುವ ಮೂಲಕ ಅಗ್ರಸ್ಥಾನಕ್ಕೇರಿದೆ.

ಸದ್ಯ ಬಿಎಸ್-6 ಎಮಿಷನ್ ಪ್ರಕಾರ ಕಾರುಗಳ ಮಾರಾಟದಲ್ಲಿಯೂ ಮಾರುತಿ ಹಲವು ಬದಲಾವಣೆಗಳನ್ನು ಮಾಡಿಕೊಂಡಿದೆ. ಅದ್ರಲ್ಲೂ ಮಾರುತಿ ಸುಜುಕಿಯು ಬ್ರೆಝಾ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ಡೀಸೆಲ್ ಎಂಜಿನ್ ಸ್ಥಗಿತಗೊಳಿಸಿ ಹೊಸ ಪೆಟ್ರೋಲ್ ಮಾದರಿಯನ್ನು ಪರಿಚಯಿಸಿರುವುದು ಪ್ರಮುಖ ಆಕರ್ಷಣೆಯಾಗಿದೆ.

ಈ ಹಿಂದೆ ನೀಡಲಾಗುತ್ತಿದ್ದ 1.3 ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದ ಮಾರುತಿ ಸುಜುಕಿ ನಿರ್ಮಾಣದ ಬಹುತೇಕ ಕಾರುಗಳು ಇದೀಗ ಸ್ಥಗಿತಗೊಂಡಿದ್ದು, ಡೀಸೆಲ್ ಆಯ್ಕೆಯ ಬದಲಾಗಿ ಪೆಟ್ರೋಲ್, ಪೆಟ್ರೋಲ್ ಹೈಬ್ರಿಡ್ ಮತ್ತು ಸಿಎನ್‌ಜಿ ಕಾರುಗಳ ಆಯ್ಕೆಯನ್ನು ಹೆಚ್ಚಿಸಲಾಗುತ್ತಿದೆ.

ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನ ಬಳಕೆಯಿಂದಾಗಿ ಎಂಜಿನ್ ಸ್ಟಾರ್ಟ್ ಸಂದರ್ಭದಲ್ಲಿ ಎಲೆಕ್ಟ್ರಿಕ್ ಮೋಟಾರ್ ಬಳಕೆಯಾಗಲಿದ್ದು, ಎಂಜಿನ್ ಚಾಲನೆ ನಂತರ ಅದು ಪೆಟ್ರೋಲ್ ಎಂಜಿನ್ ಸಂಪರ್ಕವನ್ನು ಪಡೆದುಕೊಳ್ಳುತ್ತದೆ.

ಈ ವೇಳೆ ಎಂಜಿನ್ ಸ್ಟಾರ್ಟ್ ಸಂದರ್ಭದಲ್ಲಿನ ಇಂಧನ ವ್ಯಯ ತಪ್ಪಿಸುವ ಮೈಲ್ಡ್ ಹೈಬ್ರಿಡ್ ತಂತ್ರಜ್ಞಾನವು ಈಗಾಗಲೇ ವಿಟಾರಾ ಬ್ರೆಝಾ ಪೆಟ್ರೋಲ್ ಆಟೋಮ್ಯಾಟಿಕ್ ಆವೃತ್ತಿಯಲ್ಲಿ ಜೋಡಿಸಲಾಗಿದ್ದು, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಮ್ಯಾನುವಲ್ ಮಾದರಿಯಲ್ಲೂ ಹೊಸ ತಂತ್ರಜ್ಞಾನ ಜೋಡಣೆ ಮಾಡಲಿದೆ.

Leave A Reply

Your email address will not be published.