Renault Kwid ಹ್ಯಾಚ್‌ಬ್ಯಾಕ್ ಕಾರು ಈಗ ಭಾರತದಲ್ಲಿ ಬಿಡುಗಡೆಯಾಗಲಿದ್ದು. ಎಂಟ್ರಿ ಲೆವಲ್ ಕಾರು ಮಾರಾಟದಲ್ಲಿ ಹೊಸ ಸಂಚಲನ ಮೂಡಿಸಿದೆ. ಕ್ವಿಡ್ ಹ್ಯಾಚ್‌ಬ್ಯಾಕ್ ಆವೃತ್ತಿಯು ರೆನಾಲ್ಟ್ ಕಾರು ಮಾರಾಟದಲ್ಲಿ ಮುಂಚೂಣಿಯಲ್ಲಿದ್ದು, ಇದೀಗ ನವೀಕೃತ ಆವೃತ್ತಿಯು ಮತ್ತಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ. ಕ್ವಿಡ್ ಫೇಸ್‌ಲಿಫ್ಟ್ ಮೂಲಕ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿರುವ ರೆನಾಲ್ಟ್ ಕಂಪನಿಯು ಹೊಸ ಕಾರನ್ನು ಸದ್ಯ ಬಿಎಸ್-6 ಎಂಜಿನ್‌ನೊಂದಿಗೆ ಮಾರಾಟ ಮಾಡುತ್ತಿದೆ.

2021ರ ಕ್ವಿಡ್ ಮಾದರಿಯು ಪ್ರಮುಖ ನಾಲ್ಕು ವೆರಿಯೆಂಟ್‌ಗಳಲ್ಲಿ ಮಾರುಕಟ್ಟೆ ಪ್ರವೇಶಿಸಿದ್ದು, ಗ್ರಾಹಕರ ಬೇಡಿಕೆಯೆಂತೆ 0.8-ಲೀಟರ್ ಮತ್ತು 1.0-ಲೀಟರ್ ಮಾದರಿಗಳನ್ನು ಒಳಗೊಂಡಿದೆ. ಹೊಸ ಕಾರಿನ ಬೆಲೆ ಆಧರಿಸಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 4.06 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 5.51 ಲಕ್ಷ ರೂಪಾಯಿಗೆ ಲಭ್ಯವಾಗಲಿದೆ.
ಇದನ್ನೂ ಓದಿ: 7 ಸೀಟ್ ಜೀಪ್ ಕಮಾಂಡರ್ ಎಸ್‌ಯುವಿ ಶೀಘ್ರದಲ್ಲೇ ಭಾರತಕ್ಕೆ

ಹೊಸ ಕಾರಿನಲ್ಲಿ RXE, RXL, RXT ಮತ್ತು Climber ವೆರಿಯೆಂಟ್‌ಗಳನ್ನ ಹೊಂದಿದ್ದು, ಹೊಸ ಕಾರು ಬಿಎಸ್-6 ಮಾದರಿಯಲ್ಲಿರುವಂತೆ ಬಹುತೇಕ ತಾಂತ್ರಿಕ ಅಂಶಗಳೊಂದಿಗೆ ಹೊಸದಾಗಿ ಡ್ಯುಯಲ್ ಟೋನ್ ಬಾಡಿ ಕಲರ್, ಎಲೆಕ್ಟ್ರಿಕ್ ಮೂಲಕ ಅಡ್ಜೆಸ್ಟ್ ಮಾಡಬಹುದಾದ ರಿಯರ್ ವ್ಯೂ ಮಿರರ್ ಸೇರಿದಂತೆ ಸ್ಪೋರ್ಟಿ ವಿನ್ಯಾಸದ ಮಲ್ಟಿ ಸ್ಪೋರ್ಕ್ ಅಲಾಯ್ ವ್ಹೀಲ್ ಹೊಂದಿದೆ.

0.8-ಲೀಟರ್ ಪೆಟ್ರೋಲ್ ಮಾದರಿಯು ಮ್ಯಾನುವಲ್ ಆವೃತ್ತಿಯನ್ನು ಮಾತ್ರ ಹೊಂದಿದ್ದು, ಇದು 54 ಬಿಎಚ್‌ಪಿ ಮತ್ತು 72 ಎನ್‌ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು. ಹಾಗೆಯೇ 1.0-ಲೀಟರ್ ಪೆಟ್ರೋಲ್ ಎಂಜಿನ್ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆಯ್ಕೆಗಳೊಂದಿಗೆ 68 ಬಿಎಚ್‌ಪಿ ಮತ್ತು 91 ಎನ್‌ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿವೆ.

ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಕ್ವಿಡ್ ಹ್ಯಾಚ್‌ಬ್ಯಾಕ್ ಮಾದರಿಯು ಮೊದಲ ತಲೆಮಾರಿನಿಂದ ಇಲ್ಲಿಯವರೆಗೆ ಸುಮಾರು 4 ಲಕ್ಷ ಯೂನಿಟ್‌ಗಳು ಮಾರಾಟ ಮಾಡಲಾಗಿದ್ದು, ಭಾರತದಿಂದಲೇ ಅಂತಾರಾಷ್ಟ್ರೀಯ ಮಾರುಕಟ್ಟೆಗಳಿಗೆ ರಫ್ತುಗೊಂಡ ಪ್ರಮಾಣವು ಸುಮಾರು 50 ಸಾವಿರ ಯೂನಿಟ್‌ಗಳಾಗಿದೆ.
(Renault Kwid Hatchback Car Release: New Car Price, Features You Must Know)