ಇಂಡಿಗೋ ವಿಮಾನಯಾನದ ಹಾರಾಟಕ್ಕೆ ಕೇಂದ್ರ ಸರ್ಕಾರದಿಂದ ಕತ್ತರಿ : ಇಂಡಿಗೋ ಸಂಸ್ಥೆ ಕಾರ್ಯಾಚರಣೆಯಲ್ಲಿ ಶೇ.10ರಷ್ಟು ಕಡಿತ

IndiGo Crises : ವಿವಿಧ ಕಾರಣಗಳಿಂದಾಗಿ ಏಕಾಏಕಿ ವಿಮಾನ ಹಾರಾಟ ಪ್ರಕ್ರಿಯೆ ರದ್ದುಗೊಳಿಸುವ ಮೂಲಕ ದೇಶಾದ್ಯಂತ ವಿಮಾನಯಾನ ಪ್ರಯಾಣಿಕರಿಗೆ ಇಂಡಿಗೋ ಭಾರೀ ದೊಡ್ಡ ಮಟ್ಟದಲ್ಲಿ ಸಮಸ್ಯೆಯನ್ನುಂಟು ಮಾಡಿದೆ. ಇದರಿಂದಾಗಿ ಕೇಂದ್ರ ಸರ್ಕಾರ ಇದೀಗ ಇಂಡಿಯೋ ಏರ್​ಲೈನ್ಸ್​ ವಿರುದ್ಧ ಮಹತ್ವದ ಕ್ರಮ ಕೈಗೊಂಡಿದೆ.

ಭಾರತದ ಅತೀ ದೊಡ್ಡ ವಿಮಾನಯಾನ ಸಂಸ್ಥೆ ಎಂದೇ ಖ್ಯಾತಿ ಗಳಿಸಿರುವ ಇಂಡಿಗೋ ತನ್ನ ವಿಮಾನಯಾನ ಕಾರ್ಯಾಚರಣೆ ಕಡಿತಗೊಳಿಸುವಂತೆ ಕೇಂದ್ರ ನಾಗರಿಕ ವಿಮಾನಯಾನ ಇಲಾಖೆ ಸೂಚನೆ ನೀಡಿದೆ.

ಈ ಮೂಲಕ ಪ್ರತಿನಿತ್ಯ 220 ವಾಹನಗಳ ಹಾರಾಟ ನಡೆಸುತ್ತಿದ್ದ ಇಂಡಿಗೋ ಸಂಸ್ಥೆ ಕಾರ್ಯಾಚರಣೆ 10 ಪ್ರತಿಶತ ಕಡಿತಗೊಳ್ಳಲಿದೆ. ವಿಮಾನಯಾನದಲ್ಲಿ ರದ್ದತಿಯಿಂದಾಗಿ ಭವಿಷ್ಯದಲ್ಲಿ ಪ್ರಯಾಣಿಕರಿಗೆ ಮತ್ತಷ್ಟು ತೊಂದರೆಯಾಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿರುವುದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್​ಮೋಹನ್​ ನಾಯ್ಡು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕ್ರಿಸ್‌ಮಸ್, ಹೊಸ ವರ್ಷದಂದು ಪ್ರಯಾಣಿಕರ ನಿಯಂತ್ರಣಕ್ಕೆ ರೈಲ್ವೆ ಇಲಾಖೆ ಕ್ರಮ : ಈ ಮಾರ್ಗಗಳಲ್ಲಿ ವಿಶೇಷ ರೈಲುಗಳ ಸಂಚಾರ

ದೇಶಾದ್ಯಂತ ಪ್ರತಿದಿನ 138 ತಾಣಗಳಿಗೆ ಒಟ್ಟು 2,200 ವಿಮಾನಗಳನ್ನು ಇಂಡಿಗೊ (IndiGo Crises) ಕಾರ್ಯಾಚರಣೆ ಮಾಡುತ್ತದೆ. ಇಂಡಿಗೋ ವಿಮಾನಯಾನದಿಂದಾಗಿ ಉಂಟಾದ ಈ ಸಮಸ್ಯೆಯನ್ನು ಬಗೆಹರಿಸಲು ಕೇಂದ್ರ ಸರ್ಕಾರ ಗಂಭೀರ ಕ್ರಮ ವಹಿಸುತ್ತಿದ್ದು ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಪರಿಶೀಲನೆ ನಡೆಸುತ್ತಿದೆ.

ಪ್ರಯಾಣಿಕರಿಗೆ ಪರ್ಯಾಯ ಸಂಚಾರ ವ್ಯವಸ್ಥೆ , ಟಿಕೆಟ್​ ದರ ರೀಫಂಡ್​ ಹೀಗೆ ಎಲ್ಲಾ ರೀತಿಯ ಕ್ರಮಗಳನ್ನು ಸಮರ್ಪಕವಾಗಿ ನಡೆಯುವಂತೆ ಕೇಂದ್ರ ಸರ್ಕಾರ ನಿಗಾ ವಹಿಸಿದೆ.

ರಶ್ಮಿ ಎಸ್. | Rashmi S.

ರಶ್ಮಿ ಎಸ್. ನ್ಯೂಸ್‌ ನೆಕ್ಸ್ಟ್‌ ಕನ್ನಡ ( News Next Kannada) ದಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ಹತ್ತು ವರ್ಷಗಳ ಕಾಲ ಕನ್ನಡ ಸುದ್ದಿ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ. ರಾಜಕೀಯ, ಕ್ರೀಡೆ, ವಾಣಿಜ್ಯ, ಸಿನಿಮಾ, ಸ್ಥಳೀಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರೆ. More »

Related Stories