ಬೆಂಗಳೂರು : ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕರಿಗೆ ಮಾತ್ರವೇ ಸಚಿವ ಸ್ಥಾನ ನೀಡಲಾಗುವುದು ಎಂದು ಹೇಳುವ ಮೂಲಕ ದಾವೋಸ್ ಪ್ರವಾಸದಿಂದ ಹಿಂದಿರುಗುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅನರ್ಹ ಶಾಸಕರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.
ದಾವೋಸ್ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸಾದ ಬಿ.ಎಸ್.ಯಡಿಯೂರಪ್ಪ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ನಾಳೆ ಅಮಿತ್ ಶಾ ಜೊತೆ ಚರ್ಚೆ ನಡೆಸುತ್ತೇನೆ. ಎರಡು ಮೂರು ದಿನಗಳ ಒಳಗಾಗಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ. ಈ ಕುರಿತು ಯಾರಿಗೂ ಆತಂಕ ಬೇಡ ಎಂದಿದ್ದಾರೆ.
ಅನರ್ಹ ಶಾಸಕರಿಗೆ ಬಿಗ್ ಶಾಕ್ ಕೊಟ್ಟ ಯಡಿಯೂರಪ್ಪ !
- Advertisement -