ನವದೆಹಲಿ : ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಕುರಿತು ಕೇಂದ್ರ ಸರಕಾರ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ಮಸೀದಿ ನಿರ್ಮಾಣಕ್ಕೆ ಪ್ರತ್ಯೇಕ ಜಾಗ ನೀಡಿರೋ ಕೇಂದ್ರ ಸರಕಾರ ರಾಮ ಮಂದಿರ ನಿರ್ಮಾಣದ ಕುರಿತು ರಾಮಜನ್ಮಭೂಮಿ ತೀರ್ಥಕ್ಷೇತ್ರ ಸಮಿತಿಯೊಂದನ್ನು ರಚಿಸಿದೆ. 15 ಮಂದಿಯನ್ನೊಳಗೊಂಡಿರೋ ಸಮಿತಿಗೆ ಉಡುಪಿಯ ಶ್ರೀ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಸದಸ್ಯರನ್ನಾಗಿ ನೇಮಕಮಾಡಿದೆ.
ರಾಮಜನ್ಮಭೂಮಿ ಭೂ ವಿವಾದದ ಕುರಿತು ಸುಪ್ರೀಂ ಕೋರ್ಟ್ ಇತ್ತೀಚಿಗಷ್ಟೇ ಮಹತ್ವದ ತೀರ್ಪು ಪ್ರಕಟಿಸಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ರಾಮಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣದ ಕುರಿತು ದಿಟ್ಟ ಹೆಜ್ಜೆಯನ್ನರಿಸಿದೆ. ಮಂದಿರ ನಿರ್ಮಾಣದ ಕುರಿತು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರವೆಂಬ ಹೆಸರಿನ ಸಮಿತಿಯೊಂದನ್ನು ರಚನೆ ಮಾಡಲಾಗುತ್ತಿದೆ. ರಾಮಮಂದಿರ ನಿರ್ವಹಣೆಗಾಗಿ ಟ್ರಸ್ಟ್ ರಚನೆಯ ಕುರಿತು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಕೈಗೊಳ್ಳಲಾಗಿದೆ. ಸಮಿತಿಯ ರಚನೆಗೊಂಡ ಬಳಿಕ ರಾಮಜನ್ಮ ಭೂಮಿಯನ್ನು ಟ್ರಸ್ಟ್ ಗೆ ಹಸ್ತಾಂತರ ಮಾಡಲಾಗುತ್ತದೆ.
ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಚಾಲನೆ : ಸಮಿತಿಗೆ ಪೇಜಾವರ ಶ್ರೀ ನೇಮಿಸಿದ ಕೇಂದ್ರ
- Advertisement -