ಮಂಗಳೂರು : ಆಂಧ್ರಪ್ರದೇಶ ಸರಕಾರಿ ಬಸ್ ಗೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಫರಂಗಿಪೇಟೆಯಲ್ಲಿ ನಡೆದಿದೆ.

ಮುಂಜಾನೆ 5.30ರ ಸುಮಾರಿಗೆ ಆಂದ್ರಪ್ರದೇಶದಿಂದ ಮಂಗಳೂರಿಗೆ ಬರುತ್ತಿದ್ದ ಬಸ್ ಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಘಟನೆಯಿಂದ ಬಸ್ಸಿನ ಕಿಟಕಿ ಗಾಜುಗಳು ಪುಡಿ ಪುಡಿಯಾಗಿದೆ. ಬಸ್ಸಿನಲ್ಲಿ ಒಟ್ಟು 36 ಮಂದಿ ಪ್ರಯಾಣಿಕರಿದ್ದರು, ಆದರೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆಯೇ ಸಹಜವಾಗಿದ್ದು ಅಂಗಡಿ ಮುಂಗಟ್ಟುಗಳು ತೆರೆದಿವೆ.

ಇನ್ನು ಶಾಲಾ, ಕಾಲೇಜುಗಳು ಎಂದಿನಂತೆಯೇ ಆರಂಭವಾಗಿದ್ದು, ಬಂದ್ ಬಿಸಿ ಕರಾವಳಿಯ ಮೇಲೆ ಯಾವುದೇ ಎಫೆಕ್ಟ್ ಆಗಿಲ್ಲ.