ಮಂಗಳೂರು : ಚೀನಾ ದೇಶದಲ್ಲಿ ಮರಣ ಮೃದಂಗ ಬಾರಿಸಿದ್ದ ಕೊರೊನಾ ವೈರಸ್ ಇದೀಗ ದೇಶಕ್ಕೂ ಕಾಲಿಟ್ಟಿದೆ. ಕೇರಳದಲ್ಲಿ ವಿದ್ಯಾರ್ಥಿಯೋರ್ವನಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕರಾವಳಿಗೂ ಕೊರೊನಾ ವ್ಯಾಪಿಸೋ ಭೀತಿಯಿದ್ದು, ಆರೋಗ್ಯ ಇಲಾಖೆ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಿದೆ.
ಕೇರಳದ ಯುವಕ ಇತ್ತೀಚಿಗಷ್ಟೇ ಚೀನಾದ ವುಹಾನ್ ನಿಂದ ಕೇರಳಕ್ಕೆ ಹಿಂತಿರುಗಿರುವ ವಿದ್ಯಾರ್ಥಿಯಲ್ಲಿ ಕೊರೊನಾ ವೈರಸ್ ಇಂದು ಪರೀಕ್ಷೆ ವೇಳೆ ದೃಢವಾಗಿದೆ. ಹೀಗಾಗಿ ವಿದ್ಯಾರ್ಥಿಯನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಮಾತ್ರವಲ್ಲ ಕೇರಳದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದೀಗ ಕೇರಳದಿಂದ ಕೊರೊನಾ ಸೋಂಕು ಕರಾವಳಿಗೆ ವ್ಯಾಪಿಸೋ ಆತಂಕ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಆರ್.ಸೆಲ್ವಮಣಿ ಅವರ ಅಧ್ಯಕ್ಷತೆಯಲ್ಲಿ ಈಗಾಗಲೇ ಸಭೆಯನ್ನು ನಡೆಸಲಾಗಿದ್ದು, ಕೊರೊನಾ ಸೋಂಕು ಪತ್ತೆ, ಮುನ್ನೆಚ್ಚರಿಕೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳವ ಬಗ್ಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ಹಲವು ಕಡೆಗಳಲ್ಲಿ ಸ್ಕ್ರೀನಿಂಗ್ ನಡೆಸೋ ಕಾರ್ಯವನ್ನು ಮಾಡಲಾಗುತ್ತಿದೆ.ಚೀನಾ ದೇಶವನ್ನು ಕೊರೊನಾ ಇನ್ನಿಲ್ಲದಂತೆ ಕಾಡುತ್ತಿದೆ. ಈಗಾಗಲೇ ಚೀನಾದಲ್ಲಿ ಸಾವಿನ ಸಂಖ್ಯೆ 213ಕ್ಕೆ ಏರಿಕೆಯಾಗಿದೆ. ವಿಶ್ವದ 17 ರಾಷ್ಟ್ರಗಳಿಗೆ ಕೊರೊನಾ ವೈರಸ್ ಹರಡಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದೆ.
ಕೇರಳಕ್ಕೆ ಕಾಲಿಟ್ಟ ಕೊರೊನಾ ವೈರಸ್, ಕರಾವಳಿಗರೇ ಎಚ್ಚರ….ಎಚ್ಚರ….
- Advertisement -