ಬೆಂಗಳೂರು : ದೋಸ್ತಿ ನಾಯಕರಿಗೆ ಟಾಂಗ್ ಕೊಟ್ಟು ಬಿಜೆಪಿ ಸೇರಿದ್ದ ಮಿತ್ರಮಂಡಳಿಯ 10 ಮಂದಿ ಶಾಸಕರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ. ರಮೇಶ್ ಜಾರಕಿಹೊಳಿ, ಡಾ.ಸುಧಾಕರ್, ಶಿವರಾಮ ಹೆಬ್ಬಾರ್, ಎಸ್.ಟಿ.ಸೋಮಶೇಖರ್, ಆನಂದ ಸಿಂಗ್, ಬೈರತಿ ಬಸವರಾಜ್, ಬಿ.ಸಿ.ಪಾಟೀಲ್, ಕೆ.ಗೋಪಾಲಯ್ಯ, ನಾರಾಯಣ ಗೌಡ, ಶ್ರೀಮಂತ ಪಾಟೀಲ್ ಅವರು ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆಯಲ್ಲಿ ಸುಮಾರು 13 ಮಂದಿ ಶಾಸಕರು ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಾರೆ ಅಂತಾ ಹೇಳಲಾಗುತ್ತಿತ್ತು. ಆದರೆ ಕೊನೆಯ ಹಂತದಲ್ಲಿ ಹೈಕಮಾಂಡ್ ಉಪಚುನಾವಣೆಯಲ್ಲಿ ಜಯಿಸಿದ 10 ಮಂದಿ ಶಾಸಕರಿಗೆ ಮಾತ್ರವೇ ಸಚಿವರಾಗಿ ಪ್ರಮಾಣವಚನ ಬೋಧಿಸಲು ಅವಕಾಶ ಕಲ್ಪಿಸಿತ್ತು. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಉಮೇಶ್ ಕತ್ತಿ, ಸಿ.ಪಿ.ಯೋಗೀಶ್ವರ್ ಸಮಾರಂಭಕ್ಕೆ ಗೈರುಹಾಜರಾಗಿದ್ದರು. ಮಾತ್ರವಲ್ಲ ಹಲವು ಬಿಜೆಪಿ ಶಾಸಕರು, ಮುಖಂಡರು ಕೂಡ ಸಮಾರಂಭದಲ್ಲಿ ಪಾಲ್ಗೊಂಡಿರಲಿಲ್ಲ. ಸಚಿವ ಸಂಪುಟ ವಿಸ್ತರಣೆಯಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಿದೆ. ಕೇವಲ ಬೆಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ಮಾತ್ರವೇ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಆದರೆ ಉಳಿದ ಜಿಲ್ಲೆಗಳಿಗೆ ಅನ್ಯಾಯವೆಸಗಲಾಗಿದೆ ಅನ್ನೋ ಮಾತುಗಳು ಕೇಳಿಬಂದಿವೆ.
ಕೊನೆಗೂ ಬಿಜೆಪಿ ಸಚಿವರಾದ ಮಿತ್ರಮಂಡಳಿ : ಬಿಜೆಪಿಯಲ್ಲಿ ಶುರುವಾಯಾಯ್ತು ಅಸಮಾಧಾನ
- Advertisement -