ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿ, ಸಂಜನಾ ಸೇರಿದಂತೆ ಒಟ್ಟು 6 ಮಂದಿ ಆರೋಪಿಗಳಿಗೆ ನ್ಯಾಯಾಲಯ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆವಹಿಸಿ ಆದೇಶ ಹೊರಡಿಸಿದೆ.

ಡ್ರಗ್ಸ್ ಮಾಫಿಯಾ ಹಿನ್ನೆಲೆಯಲ್ಲಿ ಪ್ರಕರಣದ ಆರೋಪಿಗಳಾಗಿರುವ ರವಿಶಂಕರ್, ರಾಗಿಣಿ, ಸಂಜನಾ, ಪ್ರಶಾಂತ್ ರಾಂಕಾ, ರಾಹುಲ್ ಹಾಗೂ ಲೂಮ್ ಪೆಪ್ಪರ್ ನನ್ನು ಸಪ್ಟೆಂಬರ್ 14ರ ವರೆಗೆ ಪೊಲೀಸ್ ಕಸ್ಟಡಿಗೆ ವಹಿಸಿ 1ನೇ ಎಐಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿರುವ 6 ಮಂದಿಯ ಪೊಲೀಸ್ ಕಸ್ಟಡಿ ಅವಧಿ ಇಂದು ಮುಕ್ತಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಿಚಾರಣೆಯ ವೇಳೆಯಲ್ಲಿ ನಟಿ ರಾಗಿಣಿ ಹಾಗೂ ಸಂಜನಾ ಯಾವುದೇ ಮಾಹಿತಿಯನ್ನು ಬಾಯ್ಬಿಟ್ಟಿಲ್ಲ. ಹೀಗಾಗಿ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 5 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಸಿಸಿಬಿ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಆದರೆ ಆರೋಪಿಗಳ ಪರ ವಕೀಲರು ಪ್ರಕರಣದಲ್ಲಿ ಸಂಜನಾ ಹಾಗೂ ರಾಗಿಣಿ ಬಾಗಿಯಾಗಿಲ್ಲ. ಹೀಗಾಗಿ ಅವರನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುವ ಅಗತ್ಯವಿಲ್ಲ ಎಂದು ಪ್ರತಿವಾದ ಮಂಡಿಸಿದ್ದರು. ಆದ್ರೆ ನ್ಯಾಯಾಧೀಶರು ಅಂತಿಮವಾಗಿ ಆರೋಪಿಗಳಿಗೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ಹೊರಡಿಸಿದೆ.