ಮಂಗಳೂರು : ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ವ್ಯಕ್ತವಾಗೋದು ಅನುಮಾನ. ಕರ್ನಾಟಕ ಬಂದ್ ಬೆಂಬಲಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ. ಸರ್ವ ಕಾಲೇಜು ವಿದ್ಯಾರ್ಥಿ ಸಂಘ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಲು ಮುಂದಾಗಿದೆ.

ತುಳುನಾಡ ಯುವಕರಿಗೆ, ವಿದ್ಯಾರ್ಥಿಗಳಿಗೆ ಶೇ. 90 ರಷ್ಟು ಉದ್ಯೋಗವನ್ನು ಸ್ಥಳೀಯವಾಗಿ ನೀಡಲು ಆಗ್ರಹಿಸಲಿದ್ದಾರೆ. ಇನ್ನು ಸಿಟಿ ಬಸ್ ಮತ್ತು ಸರ್ವೀಸ್ ಬಸ್ ಮಾಲೀಕರ ಸಂಘಟನೆಗಳು, ಹೋಟೆಲ್ ಮಾಲಕರ ಸಂಘಟ, ಆಟೋ, ಟ್ಯಾಕ್ಸಿ ಸಂಘಟನೆಗಳು ಕೂಡ ಬಂದ್ ಗೆ ಕೂಡ ಬೆಂಬಲ ನೀಡಿಲ್ಲ. ಹೀಗಾಗಿ ನಾಳೆ ಬಸ್ ಸಂಚಾರ ಎಂದಿನಂತೆ ಇರಲಿದೆ. ಜಿಲ್ಲೆಯ ಶಾಲಾ ಕಾಲೇಜುಗಳಿಗೂ ಕೂಡ ಜಿಲ್ಲಾಡಳಿತ ರಜೆ ಘೋಷಸಿಲ್ಲ. ಹೀಗಾಗಿ ನಾಳೆ ಕಡಲನಗರಿ ಸಹಜ ಸ್ಥಿತಿಯಲ್ಲಿಯೇ ಇರುವ ಸಾಧ್ಯತೆಯಿದೆ.