ಪದವಿ ಪೂರ್ವ ಉಪನ್ಯಾಸಕರಿಗೆ ಗುಡ್ ನ್ಯೂಸ್ : ನವೆಂಬರ್ 1ರ ವರೆಗೆ ದಸರಾ ರಜೆ ಘೋಷಣೆ

ಬೆಂಗಳೂರು : ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ದಸರಾರಜೆ ಘೋಷಿಸಿದ ಬೆನ್ನಲ್ಲೇ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೂ ರಾಜ್ಯ ಸರಕಾರ ಗುಡ್ ನ್ಯೂಸ್ ಕೊಟ್ಟಿದೆ.

ಅಕ್ಟೋಬರ್ 21ರಿಂದ ನವೆಂಬರ್ 1ರ ವರೆಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ದಸರಾ ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಟ್ವೀಟ್ ನಲ್ಲಿ ಉಪನ್ಯಾಸಕರಿಗೆ ರಜೆ ನೀಡುವಂತೆ ಇಲಾಖೆಯ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ಕೊರೊನಾ ವೈರಸ್ ಸೋಂಕು ಹರಡುವಿಕೆಯ ಹಿನ್ನೆಲೆಯಲ್ಲಿ ಪ್ರೌಢ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ದಸರಾ ರಜೆ ರದ್ದು ಮಾಡಲಾಗಿತ್ತು. ಆದರೆ ವಿದ್ಯಾಗಮ ಯೋಜನೆ ರದ್ದಾಗುತ್ತಿದ್ದಂತೆಯೇ ಸರಕಾರ ಶಿಕ್ಷಕರಿಗೆ ರಜೆ ಘೋಷಣೆ ಮಾಡಿತ್ತು. ಇದರ ಬೆನ್ನಲ್ಲೇ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಕೂಡ ರಜೆ ನೀಡುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲೀಗ 10 ದಿನಗಳ ದಸರಾ ರಜೆ ಘೋಷಣೆ ಮಾಡಲಾಗಿದೆ.

Comments are closed.