ಮಂಗಳೂರು : ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇರಿಸಿದ್ದ ಪ್ರಕರಣದ ಆರೋಪಿ ಆದಿತ್ಯರಾವ್‌ಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ. 10 ದಿನಗಳ ಪೊಲೀಸ್ ಕಸ್ಟಡಿ ಅಂತ್ಯಗೊಂಡ ಬೆನ್ನಲ್ಲೇ ಮಂಗಳೂರು ಪೊಲೀಸರು ಇಂದು ಮಂಗಳೂರಿನ 6ನೇ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನಷ್ಟು ವಿಚಾರಣೆ ಅಗತ್ಯವಿರೋ ಹಿನ್ನೆಲೆಯಲ್ಲಿ ಪೊಲೀಸರು ಕಸ್ಟಡಿಗೆ ನೀಡುವಂತೆ ನ್ಯಾಯಾದೀಶರಲ್ಲಿ ಮನವಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಕಿಶೋರ್ ಕುಮಾರ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಬಾಂಬರ್ ಆದಿತ್ಯರಾವ್ ಗೆ 14 ದಿನ ನ್ಯಾಯಾಂಗ ಬಂಧನ
- Advertisement -