ಮಹಿಳೆಯೊಂದಿಗೆ ರೆವಿನ್ಯೂ ಇನ್ಸ್​ಪೆಕ್ಟರ್​ ಸರ್ಕಾರಿ ಕಚೇರಿಯಲ್ಲಿ ಸರಸ : ವೀಡಿಯೋ ವೈರಲ್

ಒಡಿಶಾ : ರೆವಿನ್ಯೂ ಇನ್ಸ್​ಪೆಕ್ಟರ್​ ಒಬ್ಬರು ತಮ್ಮ ಕಚೇರಿಯಲ್ಲಿ ಮಹಿಳೆಯೊಬ್ಬರ ಜೊತೆ ಸರಸವಾಡಿದ ಘಟನೆ ಒಡಿಶಾದ ಗಾಡಸಿಲಾ ಪಟ್ಟಣದ ಉಸ್ತುವಾರಿ ಪಟ್ಟಣದ ಉಸ್ತುವಾರಿ, ಧೆಂಕನಲ್​ ಜಿಲ್ಲೆಯಲ್ಲಿ ನಡೆದಿದೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ರಂಜನ್​ ಪಾಣಿಗ್ರಹಿ ರಾಸಲೀಲೆ ನಡೆಸಿದ ಅಧಿಕಾರಿ ಯಾಗಿದ್ದಾರೆ. ಹೆಚ್ಚುವರಿ ರೆವಿನ್ಯೂ ಇನ್ಸ್​ಪೆಕ್ಟರ್​ ಆಗಿದ್ದ ಪಾಣಿಗ್ರಹಿ ಅವರನ್ನು ಕೆಲವು ತಿಂಗಳ ಹಿಂದೆ ಗಾಡಸಿಲಾ ಸರ್ಕಲ್​ ಕಚೇರಿಯ ಉಸ್ತುವರಿಯಾಗಿ ನೇಮಕ ಮಾಡಲಾಗಿತ್ತು. ಇದೀಗ ವೈರಲ್​ ಆಗಿರುವ ಅವರ ವಿಡಿಯೋದಲ್ಲಿ, ಪಾಣಿಗ್ರಹಿ ಅವರ ಕಚೇರಿಯಲ್ಲಿ ಖಾಲಿ ಮದ್ಯದ ಬಾಟೆಲ್​ಗಳಿದ್ದು, ಹೊರಗಿನವರು ಸಹ ಕಚೇರಿಯಲ್ಲಿ ಮಲಗಿರುವ ದೃಶ್ಯವಿದೆ. ಅಲ್ಲದೇ ಮಹಿಳೆಯೊಬ್ಬಳ ಜೊತೆಗೆ ಕಚೇರಿಯಲ್ಲಿಯೇ ರಾಸಲೀಲೆ ನಡೆಸಿರುವ ದೃಶ್ಯವು ಸೆರೆಯಾಗಿದೆ.

ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಧೆಂಕನಕಲ್​ ಜಿಲ್ಲಾಧಿಕಾರಿ ಭೂಮೇಶ್​ ಚಂದ್ರ ಬೆಹೆರಾ ಅವರು 6 ತಿಂಗಳ ಕಾಲ ಅಮಾನತು ಮಾಡ ಆದೇಶ ಹೊರಡಿಸಿದ್ದಾರೆ. ಅಲ್ಲದೆ, ಘಟನೆ ಸಂಬಂಧ ತನಿಖೆ ನಡೆಸಿ ವರದಿ ನೀಡುವಂತೆ ಒಡಪಾದ ತಹಸೀಲ್ದಾರ್​ ಅವರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ತನಿಖಾ ವರದಿ ಬಂದ ಬಳಿಕ ವರದಿ ಆಧರಿಸಿ ಮತ್ತೊಮ್ಮೆ ಕ್ರಮ ಜರುಗಿಸುವುದಾಗಿ ತಿಳಿಸಿದ್ದಾರೆ.

Comments are closed.