ಶುಭ ಶುಕ್ರವಾರವೇ ಸಂಪುಟ ವಿಸ್ತರಣೆ ಫಿಕ್ಸ್ !

0

ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದೆ. ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಪ್ರಯಾಣ ಬೆಳೆಸಲಿದ್ದು, ಎಲ್ಲವೂ ಅಂದುಕೊಂಡಂತೆ ಆದ್ರೆ ಜನವರಿ 31ರ ಶುಕ್ರವಾರ ಸಂಪುಟ ವಿಸ್ತರಣೆಯಾಗೋ ಸಾಧ್ಯತೆಯಿದೆ.
ಸಚಿವ ಸಂಪುಟ ವಿಸ್ತರಣೆಯ ಕುರಿತು ಸಾಕಷ್ಟು ಗೊಂದಲಗಳು ಎದ್ದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಅರ್ಹ ಶಾಸಕರು ಒತ್ತಡ ಹೇರುತ್ತಿದ್ದಾರೆ. ಇನ್ನೊಂದೆಡೆ ಬಿಜೆಪಿಯ ಹಿರಿಯ ಶಾಸಕರೂ ಕೂಡ ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅಳೆದು ತೂಗಿ ಬಾವಿ ಸಚಿವರ ಪಟ್ಟಿಯನ್ನು ಸಿದ್ದಪಡಿಸಿಕೊಂಡಿದ್ದಾರೆ. ಈಗಾಗಲೇ ವರಿಷ್ಠರ ಅನುಮತಿಯನ್ನು ಪಡೆದಿರೋ ಸಿಎಂ ಯಡಿಯೂರಪ್ಪ ಗುರುವಾರ ದೆಹಲಿಗೆ ತೆರಳಲಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಅಮಿತ್ ಶಾ ಜೊತೆ ಮಾತುಕತೆ ನಡೆಸಲಿರುವ ಯಡಿಯೂರಪ್ಪ, ಸಚಿವರ ಪಟ್ಟಿಗೆ ಅನುಮತಿ ಪಡೆದುಕೊಳ್ಳುವ ಸಾಧ್ಯತೆಯಿದೆ. ಒಂದೊಮ್ಮೆ ಯಡಿಯೂರಪ್ಪ ಸಿದ್ದಪಡಿಸಿರೋ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆಯನ್ನು ನೀಡಿದ್ರೆ ಶುಕ್ರವಾರವೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ.
ಯಡಿಯೂರಪ್ಪ ಚುನಾವಣೆಯಲ್ಲಿ ಗೆದ್ದಿರೊ ಬಹುತೇಕ ಶಾಸಕರಿಗೆ ಸಚಿವ ಸ್ಥಾನ ನೀಡುವ ಭರವಸೆಯನ್ನು ನೀಡಿದ್ದಾರೆ. ಅಲ್ಲದೇ ಹಾಲಿ ಬಿಜೆಪಿ ಶಾಸಕರನ್ನು ತನ್ನ ಪಟ್ಟಿಗೆ ಸೇರಿಸಿಕೊಂಡಿದ್ದು ಸುಮಾರು 12 ಮಂದಿಗೆ ಸಚಿವ ಸ್ಥಾನ ನೀಡಲು ಬಿಎಸ್ ವೈ ಪ್ಲಾನ್ ರೂಪಿಸಿದ್ದಾರೆ ಎನ್ನಲಾಗುತ್ತಿದೆ. ಆದ್ರೆ ಯಾರಿಗೆಲ್ಲಾ ಸಚಿವ ಸ್ಥಾನ ಲಭಿಸುತ್ತೆ ಅನ್ನುವ ಗುಟ್ಟು ಬಿಟ್ಟುಕೊಡಲು ಬಿಜೆಪಿ ನಾಯಕರು ಹಿಂದೇಟು ಹಾಕುತ್ತಿದ್ದಾರೆ.

Leave A Reply

Your email address will not be published.