ತುಮಕೂರು : ರಾಜ್ಯ ಸರಕಾರ ಉದ್ದೇಶಿಸಿರೋ ಸಪ್ತಪದಿ ಸಾಮೂಹಿಕ ವಿವಾಹಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾದಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಇನ್ಪೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಹಾಗೂ ನಟ ಯಶ್ ರಾಯಭಾರಿಗಳಾಗಿದ್ದಾರೆ ಎಂದು ಮುಜರಾಯಿ ಹಾಗೂ ಮೀನುಗಾರಿಕಾ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಡವರು ಹಾಗೂ ಜನಸಾಮಾನ್ಯರಿಗೆ ಸರಳ ವಿವಾಹವಾಗಲು ಅನಕೂಲ ಕಲ್ಪಿಸುವ ನಿಟ್ಟಿನಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ 100 ಎ ವರ್ಗದ ಆಯ್ದ ದೇವಾಲಯಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ 36,000 ದೇವಾಲಯಗಳು ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡಲಿದ್ದು, ಇವುಗಳ ಆಸ್ತಿ ಸರ್ವೇ ಕಾರ್ಯ ನಡೆಯುತ್ತಿದೆ. ಆಸ್ತಿಗಳ ಸಂಪೂರ್ಣ ಸರ್ವೇ ನಡೆದ ನಂತರ ಗಣಕೀಕೃತಗೊಳಿಸಲಾಗುವುದು. ರಾಜ್ಯದಲ್ಲಿ 25 ಲಕ್ಷಕ್ಕಿಂತ ಹೆಚ್ಚು ಆದಾಯವಿರುವ 190 ದೇವಾಲಯಗಳಿದ್ದು, 5 ಲಕ್ಷಕ್ಕಿಂತ ಆದಾಯ ಹೊಂದಿರುವ 33,000 ದೇವಾಲಯಗಳಿವೆ ಎಂದು ಮಾಹಿತಿ ನೀಡಿದರು.
ಸಪ್ತಪದಿಗೆ ರಾಯಬಾರಿಗಳಾದ ಹೆಗಡೆ, ಸುಧಾಮೂರ್ತಿ, ಯಶ್
- Advertisement -
RELATED ARTICLES