ಸುಳ್ಯ : ಮನೆಯಲ್ಲಿ ಇಟ್ಟಿದ್ದ ಗ್ಯಾಸ್ ಸಿಲಿಂಡರ್ ಸಿಡಿದು ಮನೆಯೊಂದು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಲೆಟ್ಟಿ ಗ್ರಾಮದ ಗುಂಡ್ಯದಲ್ಲಿ ನಡೆದಿದೆ. ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಳ್ಳುವ ವೇಳೆಯಲ್ಲಿ ಯಾರೂ ಇರಲಿಲ್ಲ. ಹೀಗಾಗಿ ಬಾರೀ ದುರಂತವೊಂದು ತಪ್ಪಿದಂತಾಗಿದೆ. ಕೃಷ್ಣ ಎಂಬವರಿಗೆ ಸೇರಿದ ಮನೆಯಲ್ಲಿ ಪತ್ನಿ ಮತ್ತು ಮಗಳು ಮಾತ್ರ ವಾಸವಿದ್ದರು. ಘಟನೆಯ ಸಮಯದಲ್ಲಿ ಅವರಿಬ್ಬರು ಸುಳ್ಯಕ್ಕೆ ಹೊಗಿದ್ದು ಮನೆಯಲ್ಲಿ ಈ ಸಮಯದಲ್ಲಿ ಯಾರೂ ಇಲ್ಲವಾದ್ದರಿಂದ ಪ್ರಾಣಹಾನಿ ಸಂಭವಿಸಿಲ್ಲ.
ಸಂಜೆ 4 ಗಂಟೆ ಸುಮಾರಿಗೆ ಮನೆಯಲ್ಲಿ ಹೊಗೆ ಕಾಣಿಸಿಕೊಂಡಿದ್ದು ಸ್ವಲ್ಪ ಹೊತ್ತಿನಲ್ಲಿ ಭಾರಿ ಸದ್ದು ಕೇಳಿಸಿತು. ಮನೆಯ ಒಳಗಡೆ ಗ್ಯಾಸ್ ಸಿಲಿಂಡರ್ ಹೊಡೆದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದೆ. ಮನೆ ಬಹುತೇಕ ನಾಶವಾಗಿದೆ. ಮನೆಯ ಎದುರಲ್ಲಿದ್ದ ತೆಂಗಿನ ಮರದ ತುದಿಯವರೆಗೆ ಬೆಂಕಿಯ ಕೆನ್ನಾಲಿಗೆ ಹತ್ತಿ ತೆಂಗಿನ ಮರಕ್ಕೂ ಬೆಂಕಿ ಹತ್ತಿಕೊಂಡಿತು ಎನ್ನಲಾಗಿದೆ. ಸ್ಥಳಕ್ಕೆ ಸುಳ್ಯ ಅಗ್ನಿಶಾಮಕ ಹಾಗು ಸಾರ್ವಜನಿಕರ ಸಹಕಾರದೊಂದಿಗೆ ಬೆಂಕಿ ನಂದಿಸಿದ್ದಾರೆ. ಆದರೆ ಯಾವ ಕಾರಣಕ್ಕೆ ಸಿಲಿಂಡರ್ ಸ್ಪೋಟಗೊಂಡಿದೆ ಅನ್ನೋದು ಇನ್ನಷ್ಟೇ ತಿಳಿದುಬರಬೇಕಿದೆ.
ಸಿಲಿಂಡರ್ ಸಿಡಿದು ಸುಟ್ಟು ಕರಕಲಾಯ್ತು ಮನೆ !
- Advertisement -
RELATED ARTICLES