ಮಂಗಳೂರಲ್ಲಿ ಮತ್ತೆ ರಾಗಿಂಗ್ ಭೂತ : 11 ಮಂದಿ ಕಾಲೇಜು ವಿದ್ಯಾರ್ಥಿಗಳು ಅರೆಸ್ಟ್

ಮಂಗಳೂರು : ಕಳೆದ ಕೆಲ ದಿನಗಳ ಹಿಂದೆಯಷ್ಟೇ ರಾಗಿಂಗ್ ಆರೋಪ ಕೇಳಿಬಂದ ಬೆನ್ನಲ್ಲೇ ಇದೀಗ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ರಾಗಿಂಗ್ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ 11 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ಹೊರವಲಯದಲ್ಲಿರುವ ಕಣಚೂರು ಕಾಲೇಜಿನ ವಿದ್ಯಾರ್ಥಿಗಳಾಗಿರುವ ಮೊಹಮ್ಮದ್ ಶಮಾಸ್, ಅವಿನ್ ಜೋಯ್, ಆಬಿನ್ ಬಿಜು, ಜೆರಾನ್ ಸಿರಿಲ್, ಜಬಿನ್ ಮಹರೂಪ್, ಮೊಹಮ್ಮದ್ ಸೂರಜ್, ಜಫಿನ್, ಅಬ್ದುಲ್ ಬಸಿತ್, ಅಶಿನ್ ಬಾಬು, ಅಬ್ದುಲ್ ಅನಾಸ್ ಮೊಹಮ್ಮದ್, ಅಕ್ಷಯ್ ಕೆ.ಎಸ್. ಬಂಧಿತ ವಿದ್ಯಾರ್ಥಿಗಳಾಗಿದ್ದಾರೆ.

ಕಾಲೇಜಿನ ಫಿಸಿಯೋಥೆರಪಿ ಮತ್ತು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದ ಐವರು ವಿದ್ಯಾರ್ಥಿಗಳಿಗೆ ರಾಗಿಂಗ್ ನಡೆಸಿದ ಆರೋಪ ಕೇಳಿಬಂದಿದೆ. ಬಂಧಿತ ವಿದ್ಯಾರ್ಥಿಗಳೆಲ್ಲರೂ ಕೇರಳ ಮೂಲದವರಾಗಿದ್ದು, ಇದೇ ವಿದ್ಯಾರ್ಥಿಗಳ ವಿರುದ್ದ ರಾಗಿಂಗ್ ಮಾಡಿರುವ ಆರೋಪ ಕೇಳಿಬಂದಿತ್ತು. ಮಾತ್ರವಲ್ಲ ಈ ಕುರಿತು ವಿದ್ಯಾರ್ಥಿಗಳು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಗೆ ದೂರು ನೀಡಿದ್ದರೂ ಕೂಡ ಯಾವುದೇ ಪ್ರಯೋಜನವಾಗಿರಲಿಲ್ಲ.

ಅಂತಿಮವಾಗಿ ರಾಗಿಂಗ್ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, 18 ಮಂದಿ ವಿದ್ಯಾರ್ಥಿಗಳ ಪೈಕಿ ಇದೀಗ 11 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಯನ್ನು ನಡೆಸುತ್ತಿದ್ದಾರೆ.

Comments are closed.