40 ದಿನದ ಮಗುವಿನ ಹೃದಯ ಚಿಕಿತ್ಸೆಗೆ ಝೀರೋ ಟ್ರಾಫಿಕ್ : ಮಂಗಳೂರಿನಿಂದ ಬೆಂಗಳೂರಿಗೆ ಅಂಬುಲೆನ್ಸ್ ರವಾನೆ

0

ಮಂಗಳೂರು : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಕಂದಮ್ಮನಿಗೆ ಬೆಂಗಳೂರಲ್ಲಿ ಚಿಕಿತ್ಸೆ ನೀಡಲು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಆಂಬ್ಯುಲೆನ್ಸ್ ಮೂಲಕ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲಾಯಿತು.

40 ದಿನದ ಸೈಫುಲ್ ಅಝ್ಮಾನ್ ಎಂಬ ಮಗುವೊಂದು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿತ್ತು. ಹೆಚ್ಚಿನ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬುಲೆನ್ಸಿನಲ್ಲಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಝೀರೋ ಟ್ರಾಫಿಕ್ ವ್ಯವಸ್ಥೆಯ ಮೂಲಕ ಮಗುವನ್ನು ಕೊಂಡೊಯ್ಯಲಾಯಿತು.

ಮಂಗಳೂರಿನಿಂದ ಹೊರಟು ಬಿ.ಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ, ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲುಪಲಿತು. ಬೆಂಗಳೂರು ತಲುಪುತ್ತಿದ್ದಂತೆಯೇ ಅಂಬ್ಯಲೆನ್ಸ್ ಚಾಲಕನನ್ನು ಅಭಿನಂದಿಸಲಾಯಿತು. ಟ್ರಾಫಿಕ್ ವ್ಯವಸ್ಥೆಗೆ ರಾಜ್ಯ ಪೊಲೀಸ್ ಇಲಾಖೆಯು ಸಂಪೂರ್ಣ ಸಹಕಾರ ನೀಡಿದ್ದು, ಪೊಲೀಸರ ಜೊತೆಗೆ ಸಾಮಾಜಿಕ ಸಂಘಟನೆಗಳ ಕಾರ್ಯಕರ್ತರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಜನರು ಸುಗಮ ಸಂಚಾರಕ್ಕೆ ನೆರವು ನೀಡಿದ್ದಾರೆ.

ಮಂಗಳೂರಿನಿಂದ ಬೆಂಗಳೂರಿಗೆ ಮಗುವನ್ನು ಸಾಗಾಟ ಮಾಡಿದ ವಿಡಿಯೋ :

https://www.youtube.com/watch?v=LnhNR_dvny4

Leave A Reply

Your email address will not be published.