ಪಂಚ ರಾಜ್ಯಚುನಾವಣೆ ದಿನಾಂಕ ಪ್ರಕಟ, ಇಂದಿನಿಂದಲೇ ನೀತಿ ಸಂಹಿತೆ ಜಾರಿ

ನವದೆಹಲಿ : ಪಂಚರಾಜ್ಯಗಳ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಮಾರ್ಚ್ 27ರಿಂದಲೇ ಚುನಾವಣೆ ನಡೆಯಲಿದ್ದು, ಮೇ 2 ರಂದು ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ನಡೆಯಲಿದೆ. ಪಂಚ ರಾಜ್ಯಗಳಲ್ಲಿಯೂ ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಸುನಿಲ್ ಆರೋರಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ತಮಿಳುನಾಡು, ಕೇರಳ, ಪಶ್ಚಿಮ ಬಂಗಾಲ, ಪುದುಚೇರಿ ಹಾಗೂ ಅಸ್ಸಾಂ ಸೇರಿದಂತೆ ಒಟ್ಟು 5 ರಾಜ್ಯಗಳ ಒಟ್ಟು 824 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.ಮಾರ್ಚ್ 27, ಎಪ್ರೀಲ್ 1 ಹಾಗೂ ಎಪ್ರಿಲ್ 6 ರಂದು ಅಸ್ಸಾಂನಲ್ಲಿ ಚುನಾವಣೆ ನಡೆಯಲಿದೆ. ಒಟ್ಟು ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ. ಕೇರಳದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಎಪ್ರಿಲ್ 6ರಂದು ಕೇರಳದ 147 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ತಮಿಳು ನಾಡಿನ 234 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ತಮಿಳುನಾಡಿನಲ್ಲಿ 6ರಂದೇ ಚುನಾವಣೆ ಘೋಷಣೆಯಾಗಿದೆ. ಪುದುಚೇರಿಯಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು, ಎಪ್ರಿಲ್ 6ರಂದು ಚುನಾವಣೆ ನಡೆಯಲಿದೆ.

ಪಶ್ಚಿಮ ಬಂಗಾಲದಲ್ಲಿ ಒಟ್ಟ 8 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದ ಮತದಾನ ಮಾರ್ಚ್ 27ರಂದು ನಡೆಯಲಿದ್ದು, 2ನೇ ಹಂತ ಎಪ್ರಿಲ್ 1, ಮೂರನೇ ಹಂತ ಎಪ್ರಿಲ್ 6, ನಾಲ್ಕನೇ ಹಂತ ಎಪ್ರಿಲ್ 8, ಐದನೇ ಹಂತ ಎಪ್ರಿಲ್ 17, ಆರನೇ ಹಂತದ ಮತದಾನ ಎಪ್ರಿಲ್ 22, ಏಳನೇ ಹಂತ ಎಪ್ರಿಲ್ 26 ಹಾಗೂ ಕೊನೆಯ ಹಂತದ ಮತದಾನ ಎಪ್ರಿಲ್ 29 ರಂದು ನಡೆಯಲಿದೆ ಎಂದು ಘೋಷಿಸಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಮತದಾನದಲ್ಲಿ ನೂಕು ನುಗ್ಗಲು ನಡೆಯದಂತೆ ತಡೆಯುವ ಸಲುವಾಗಿ ಈ ಬಾರಿ ಶೇ.30 ಕ್ಕಿಂತ ಅಧಿಕ ಮತಗಟ್ಟೆಗಳನ್ನು ರಚಿಸಲಾಗುತ್ತದೆ. ಆಯಾಯ ರಾಜ್ಯಗಳ ಆರೋಗ್ಯ ಇಲಾಖೆಯೊಂದಿಗೆ ನಿರಂತರ ಸಂಪರ್ಕವನ್ನು ಹೊಂದಿದ್ದು, ಹಿರಿಯ ನಾಗರಿಕರಿಗೆ ಅಂಚೆ ಮೂಲಕ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಮತದಾನವನ್ನು ನೇರ ಪ್ರಸಾರ ಮಾಡಲಾಗುತ್ತದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕವೇ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ನಾಮಪತ್ರ ಸಲ್ಲಿಸಲು 2 ವಾಹನಗಳಲ್ಲಿ ಮಾತ್ರವೇ ಬರಬೇಕು, ಮನೆ ಮನೆಗೆ ತೆರಳಿ ಮತದಾನ ಮಾಡಲು ಕೇವಲ 5 ಮಂದಿಗೆ ಮಾತ್ರವೇ ಅವಕಾಶವನ್ನು ಕಲ್ಪಿಸಲಾಗುತ್ತಿದೆ. ರೋಡ್ ಶೋ ನಡೆಸುವಾಗ 5 ವಾಹನಗಳನ್ನು ಮಾತ್ರವೇ ಬಳಸಬಹುದಾಗಿದೆ. ಚುನಾವಣಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಸಿ ವಿಜಿಲ್ ಆ್ಯಪ್ ಬಳಕೆ ಮಾಡಲಾಗುತ್ತಿದೆ ಎಂದಿದ್ದಾರೆ.

ಕರ್ನಾಟಕದಲ್ಲಿನ ಮೂರು ವಿಧಾನಸಭಾ ಉಪಚುನಾವಣೆ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಪ್ರತ್ಯೇಕವಾಗಿ ಮಾರ್ಗಸೂಚಿ ಹೊರಡಿಸಲಾಗುವುದು ಎಂದಿದ್ದಾರೆ.

Comments are closed.