ಶಿವಮೊಗ್ಗ : ಕಳೆದ 8 ತಿಂಗಳಿನಿಂದಲೂ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗುರುವಿನಪುರದಲ್ಲಿ ನಡೆದಿದೆ.
ಬಸ್ಸಿನ ಮಾಲೀಕ ಶಿವು ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಹೇರಿಕೆಯಾದ ಲಾಕ್ ಡೌನ್ ನಿಂದಾಗಿ ಬಸ್ಸನ್ನು ತಂದು ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದರು. ಕಳೆದೆಂಟು ತಿಂಗಳಿನಿಂದಲೂ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ ಬಸ್ಸಿನಲ್ಲಿ ಇಂದು ಒಮ್ಮಿಂದೊಮ್ಮೆಲೆ ಬೆಂಕಿ ಕಾಣಿಸಿಕೊಂಡಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಈ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಆದರೆ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.