Breaking

ಉಡುಪಿ, ಬೆಂಗಳೂರಲ್ಲಿ ಬೆಳ್ಳಂಬೆಳ್ಳಗ್ಗೆಯೇ ಎಸಿಬಿ ದಾಳಿ

Published by
Kannada News Next Desk

ಬೆಂಗಳೂರು : ಅಕ್ರಮ ಆಸ್ತಿ ಸಂಪಾದನೆಯ ಆರೋಪದ ಹಿನ್ನೆಲೆಯಲ್ಲಿ ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಡಾ.ಸುಧಾ ಅವರ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಉಡುಪಿ ಸೇರಿದಂತೆ ಒಟ್ಟು 6 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ಇರುವ ಮನೆ ಬೆಂಗಳೂರಿನ ಮನೆ, ಕಚೇರಿ ಸೇರಿದಂತೆ 6 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾತ್ರವಲ್ಲ ಉಡುಪಿ ಜಿಲ್ಲೆಯ ಹೆಬ್ರಿ ಬಿಡಿಎನಲ್ಲಿ ವಿಶೇಷ ಭೂ ಸ್ವಾಧೀನಾಧಿಕಾರಿಯಾಗಿದ್ದ ಅವಧಿಯಲ್ಲಿ ಡಾ. ಬಿ. ಸುಧಾ ಅವರ ವಿರುದ್ಧ ಎಸಿಬಿಯಲ್ಲಿ ಅಕ್ರಮ ಆಸ್ತಿ ಗಳಿಕೆ ಹಾಗೂ ಅವ್ಯವಹಾರದ ಕುರಿತಾಗಿ ದೂರು ದಾಖಲಾಗಿತ್ತು.

ಬಿಡಿಎಯಲ್ಲಿ ಭೂ ಸ್ವಾಧೀನಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ವೇಳೆ ಡಾ. ಸುಧಾ ಭೂ ಪರಿಹಾರ ನೀಡುವ ವಿಚಾರದಲ್ಲಿ ತಮ್ಮ ಗಂಡ ಮತ್ತು ದಲ್ಲಾಳಿಗಳ ಮೂಲಕ ಲಂಚ ಪಡೆಯುತ್ತಿದ್ದರು. ಅಲ್ಲದೆ, ತಮ್ಮ ಸಂಬಳಕ್ಕಿಂತಲೂ ಆದಾಯದ ಮೊತ್ತ ಜಾಸ್ತಿ ಇದೆ ಎಂದು ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಾಂ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದರು.

ಈ ಪ್ರಕರಣದ ಬಗ್ಗೆ ವಿಚಾರಣೆ ನಡೆಸಿ, ವರದಿ ಸಲ್ಲಿಸುವಂತೆ ಎಸಿಬಿಗೆ ಆದೇಶಿಸಲಾಗಿತ್ತು. ಈ ಹಿನ್ನೆಲೆಯಲ್ಲಿಯೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಾ.ಬಿ.ಸುಧಾಪ್ರಸ್ತುತ ಜೈವಿಕ ತಂತ್ರಜ್ಞಾನ ಇಲಾಖೆಯಲ್ಲಿ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Share