BIG NEWS : ಭೀಕರ ಕಾರು ಅಪಫಾತ : ಗರ್ಭಿಣಿ ಸೇರಿ 7 ಮಂದಿ ಸಾವು

0

ಕಲಬುರಗಿ : ರಸ್ತೆಯ ಪಕ್ಕದಲ್ಲಿ ನಿಂತಿದ್ದ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಭೀಕರ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ.

ಕಲಬುರಗಿ ನಗರದ ಹೊರವಲಯದಲ್ಲಿರುವ ಸಾವಳಗಿ ಬಳಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದು ಭೀಕರ ದುರಂತ ಸಂಭವಿಸಿದೆ. ಮೃತರನ್ನು ಗರ್ಭಿಣಿ ಇರ್ಫಾನಾ ಬೇಗಂ (25), ರುಬಿಯಾ ಬೇಗಂ (50), ಅಬೇದಾಬಿ ಬೇಗಂ (50), ಜಯಚುನಬಿ (60) ಹಾಗೂ ಮುನೀರ್ (28), ಮಹಮ್ಮದ್ ಅಲಿ (38), ಶೌಕತ್ ಅಲಿ (29) ಎಂಬುವವರೇ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಮೃತರಲ್ಲಿ ಗರ್ಭಿಣಿ ಸೇರಿ ನಾಲ್ವರು ಮಹಿಳೆಯರು ಹಾಗೂ ಮೂವರು ಪುರುಷರು. ಇವರೆಲ್ಲರೂ ಆಳಂದ ತಾಲೂಕಿನ ನಿವಾಸಿಗಳು. ಗರ್ಭಿಣಿಯನ್ನು ಹೆರಿಗೆಗಾಗಿ ಕಲಬುರಗಿಗೆ ಕರೆದುಕೊಂಡು ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಕಲಬುರಗಿ ನಗರ ಸಂಚಾರ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.