ಮಂಡ್ಯ: ನಿಂತಿದ್ದ ಲಾರಿಗೆ ಕಾರು ಢಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪ ವೃತ್ತದ ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ.
ಕಾರಿನಲ್ಲಿದ್ದ ಜಯದೇವ್, ಕಿರಣ್ ಅಶೋಕ್ ಹಾಗೂ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಲಾರಿಯೊಂದು ರಸ್ತೆಯ ಪಕ್ಕದಲ್ಲಿ ನಿಂತಿದ್ದು, ವೇಗವಾಗಿ ಬಂದ ಕಾರು ಲಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೃತರೆಲ್ಲರೂ ಕೇರಳ ಮೂಲದವರು ಎಂದು ತಿಳಿದು ಬಂದಿದೆ. ಅಪಘಾತದಿಂದಾಗಿ ಕಾರು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿದೆ. ಪ್ರಕರಣ ದಾಖಲು ಮಾಡಿಕೊಂಡಿರುವ ಮದ್ದೂರು ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.