ಮರಕ್ಕೆ ಪೊಲೀಸ್ ಜೀಪ್ ಢಿಕ್ಕಿ: ಎಎಸ್ಐ, ಮುಖ್ಯ ಪೇದೆ ಸಾವು

ಮೈಸೂರು: ಪೊಲೀಸ್ ಜೀಪ್ವೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ, ಕರ್ತವ್ಯ ನಿರತ ಪೊಲೀಸರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆ.ಆರ್.ನಗರ ತಾಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ನಡೆದಿದೆ.

ಎಎಸ್ಐ ಮೂರ್ತಿ(45) ಹಾಗೂ ಮುಖ್ಯಪೇದೆ ಶಾಂತಕುಮಾರ್(40) ಮೃತ ದುರ್ದೈವಿಗಳಾಗಿದ್ದಾರೆ. ಇಬ್ಬರೂ ಕೂಡ ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಧ್ಯರಾತ್ರಿ ಸಾಲಿಗ್ರಾಮದಿಂದ ಕೆ.ಆರ್. ನಗರದ ಕಡೆ ತೆರಳುವ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

Comments are closed.