ನೆಲಮಂಗಲ : ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರೋ ಘಟನೆ ನೆಲಮಂಗಲ ಸಮೀಪ ನಡೆದಿದೆ. ನೆಲಮಂಗಲದ ಯಂಟಗಾನಹಳ್ಳಿಯ ಬಳಿ ವೇಗವಾಗಿ ಬರುತ್ತಿದ್ದ ಕಾರು ಡಿವೈಡರ್ ಢಿಕ್ಕಿ ಹೊಡೆದಿದೆ. ನಂತರ ಎದುರಿನಿಂದ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ.

ಢಿಕ್ಕಿಯ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದರೆ, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿರೋ ನೆಲಮಂಗಲ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸುತ್ತಿದ್ದಾರೆ.