ಉಡುಪಿ : ಆದಿವುಡುಪಿಯಲ್ಲಿನ ಹೋಟೆಲ್ ವೊಂದರ 18 ಮಂದಿ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹೋಟೆಲ್ ಮಾಲೀಕರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಹೋಟೆಲ್ ಸೀಲ್ ಡೌನ್ ಮಾಡಲಾಗಿತ್ತು. ಇದೀಗ ಹೋಟೆಲ್ ಸಿಬ್ಬಂದಿಗಳಿಗೂ ಸೋಂಕು ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ.

ಹೋಟೆಲ್ ಮಾಲೀಕರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಹೋಟೆಲ್ ನ 20 ಮಂದಿ ಸಿಬ್ಬಂದಿಗಳನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಈ ಪೈಕಿ 18 ಮಂದಿ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಇನ್ನು ಕ್ವಾರಂಟೈನ್ ನಲ್ಲಿದ್ದವರ ಪೈಕಿ ಇಬ್ಬರು ಕ್ವಾರಂಟೈನ್ ನಿಯಮ ಉಲ್ಲಂಘಿಸಿದ್ದಾರೆಂಬ ಆರೋಪ ಕೇಳಿಬಂದಿದೆ.
ಇನ್ನು ಸಿಬ್ಬಂದಿಗಳ ಜೊತೆಗೆ ಸಂಪರ್ಕದಲ್ಲಿರುವವರು ಹಾಗೂ ಹೋಟೆಲ್ ಗೆ ಭೇಟಿ ನೀಡಿರುವ ಗ್ರಾಹಕರ ಕುರಿತು ಕೂಡ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.