ಡಿ.4 ರಿಂದ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 4 ರಿಂದ ಮತ್ತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಡಿಸೆಂಬರ್ 3ರಂದು ಕನ್ಯಾಕುಮಾರಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 4 ಮತ್ತು 5ರಂದು ಭಾರಿ ಮಳೆ ಸುರಿಯಲಿದೆ. ದಕ್ಷಿಣ ಒಳನಾಡಿನ ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಡಿಸೆಂಬರ್ 4ರಂದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Comments are closed.