ಪಾಕ್ ಪರ ಘೋಷಣೆ ಕೂಗಿದ ಯುವತಿ : ಪೊಲೀಸರಿಂದ ದೇಶದ್ರೋಹದ ಕೇಸ್ ದಾಖಲು !

0

ಬೆಂಗಳೂರು : ಪೌರತ್ವ ವಿರೋಧಿ ಪ್ರತಿಭಟನೆಯ ವೇಳೆಯಲ್ಲಿ ಯುವತಿಯೋರ್ವಳು ಪಾಕಿಸ್ಥಾನದ ಪರ ಘೋಷಣೆ ಕೂಗಿದ್ದಾಳೆ.ಯುವತಿಯನ್ನು ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದು, ಯುವತಿಯನ್ನು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಅಮೂಲ್ಯ ಲಿಯೋನಾ ಎಂಬಾಕೆ ಭಾಷಣದ ವೇಳೆಯಲ್ಲಿ ಪಾಕಿಸ್ಥಾನದ ಪರ ಘೋಷಣೆ ಕೂಗಿದ್ದಾಳೆ. ಯುವತಿ ಪಾಕ್ ಪರ ಘೋಷಣೆ ಕೂಗುತ್ತಿದ್ದಂತೆಯೇ ಉಪ್ಪಾರಪೇಟೆ ಪೊಲೀಸ್ ಠಾಣೆಯ ಪೊಲೀಸರು ಯುವತಿಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಬಿಬಿಎಂಪಿ ಕಾರ್ಪೋರೇಟರ್ ಅಕ್ರಂ ಪಾಷಾ ಎಂಬವರು ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಯುವತಿಯನ್ನು ವಶಕ್ಕೆ ಪಡೆದಿರೊ ಪೊಲೀಸರು ಗೌಪ್ಯ ಸ್ಥಳದಲ್ಲಿ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಯುವತಿಯ ಹಿನ್ನೆಲೆ, ಕಾರ್ಯಕ್ರಮಕ್ಕೆ ಆಕೆಯನ್ನು ಆಹ್ವಾನಿಸಿದವರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಯುವತಿ ಪಾಕ್ ಪರ ಘೋಷಣೆ ಕೂಗಿರೋ ವಿರುದ್ದ ದೇಶದಾದ್ಯಂತ ಬಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇತ್ತೀಚಿಗಷ್ಟೇ ಹುಬ್ಬಳ್ಳಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕ್ ಪರ ಘೋಷಣೆ ಕೂಗಿ ಬಂಧಿತರಾಗಿದ್ದರು. ಆದ್ರೀಗ ಬೆಂಗಳೂರಿನಲ್ಲಿ ಯುವತಿ ಘೋಷಣೆ ಕೂಗಿದ್ದಾಳೆ. ಅಮೂಲ್ಯ ಲಿಯೋನಾ ಇತ್ತೀಚೆಗೆ ರಾಜ್ಯದಲ್ಲಿ ಸಿಎಎ ವಿರುದ್ದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಳು. ಆದ್ರೀಗ ಪಾಪಿ ಪಾಕಿಸ್ಥಾನಕ್ಕೆ ಜಯಕಾರ ಕೂಗೋ ಮೂಲಕ ಜನತೆ ಯುವತಿಯ ವಿರುದ್ದ ಸಿಡಿದೆದ್ದಿದ್ದಾರೆ.

Leave A Reply

Your email address will not be published.