ಬೆಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆದ ಪ್ರತಿಭಟನೆಯ ವೇಳೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನ್ ಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ನಡೆದ ಪ್ರತಿಭಟನೆಯ ವೇಳೆಯಲ್ಲಿ ವೇದಿಕೆ ಮೇಲೆ ಅಮೂಲ್ಯ ಲಿಯೋನ್ ‘ಪಾಕಿಸ್ತಾನ’ ಜಿಂದಾಬಾದ್’ ಎಂದು ಎರಡೆರಡು ಬಾರಿ ಘೋಷಣೆ ಕೂಗಿದ್ದಳು. ಆಕೆಯನ್ನು ಬಂಧಿಸಿದ್ದ ಪೊಲೀಸರು ದೇಶದ್ರೋಹದ ಪ್ರಕರಣ ದಾಖಲಿಸಿದ್ದ ಉಪ್ಪಾರಪೇಟೆ ಠಾಣೆಯ ಪೊಲೀಸರು ತಡರಾತ್ರಿ ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ 5 ನೇ ಎಸಿಎಂಎಂ ನ್ಯಾಯಾಧೀಶರ ಮುಂದೆ ಅಮೂಲ್ಯಳನ್ನು ಹಾಜರುಪಡಿಸಿದ್ದರು. ನ್ಯಾಯಾಧೀಶೆ ಶಿರಿನ್ ಜೆ ಅನ್ಸಾರಿ ಅವರು ಅಮೂಲ್ಯಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.
ಅಮೂಲ್ಯ ಲಿಯೋನಾಗೆ 14 ದಿನ ನ್ಯಾಯಾಂಗ ಬಂಧನ
- Advertisement -