ಬೆಂಗಳೂರು : ಪೌರತ್ವ ಕಾಯಿದೆ ವಿರೋಧಿಸಿ ಆಯೋಜಿಸಿದ್ದ ಪ್ರತಿಭಟನೆಯ ವೇಳೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನ್ ವಿರುದ್ದ ದೇಶದ್ರೋಹದ ಪ್ರಕರಣ ದಾಖಲಾಗಿದೆ.

ನಗರದ ಫ್ರೀಡಂ ಪಾರ್ಕ್ ನಲ್ಲಿ ಟಿಪ್ಪು ಸುಲ್ತಾನ್ ಯುನೈಟೆಡ್ ಫ್ರಂಟ್ ಪೌರತ್ವ ಕಾಯಿದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿತ್ತು. ಅಸಾವುದ್ದೀನ್ ಓವೈಸಿ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಪ್ರತಿಭಟನೆ ಆರಂಭವಾಗುತ್ತಿದ್ದಂತೆಯೇ ವೇದಿಕೆಯ ಮೇಲೆ ಬಂದ ಅಮೂಲ್ಯ ಲಿಯೋನ್ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದಾಳೆ. ಪಾಕ್ ಪರ ಘೋಷಣೆ ಕೂಗುತ್ತಿದ್ದಂತೆಯೇ ಪೊಲೀಸರು ಆಕೆಯವನ್ನು ವಶಕ್ಕೆ ಪಡೆದುಕೊಂಡ್ರು. ರಹಸ್ಯ ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಅಮೂಲ್ಯ ವಿಚಾರಣೆ ನಡೆಸಿ, ಆಕೆಯ ವಿರುದ್ದ ಐಪಿಸಿ ಸೆಕ್ಷನ್ 124, 153ಎ, 153ಬಿ, 505/2, ಹಾಗೂ 34 ಸೆಕ್ಷನ್ ಅಡಿಯಲ್ಲಿ ಉಪ್ಪಾರಪೇಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.