ಬೆಂಗಳೂರು : ಪಾಕ್ ಪರ ಜೈಕಾರ ಹಾಕಿದ್ದ ಅಮೂಲ್ಯ ಲಿಯೋನ್ ಳನ್ನು 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಮೂಲ್ಯಳನ್ನ ಭದ್ರತೆಯ ದೃಷ್ಟಿಯಿಂದ ನ್ಯಾಯಾಲಯಕ್ಕೆ ಕರೆತರಲು ಸಾಧ್ಯವಿಲ್ಲವೆಂದು ಪೊಲೀಸರು 5ನೇ ಎಸಿಎಂಎಂ ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದರು. ಮನವಿಯನ್ನು ಪುರಸ್ಕರಿಸಿದ್ದ ನ್ಯಾಯಾಲಯ ಪುರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಮೂಲ್ಯ ಲಿಯೋನ್ ಳನ್ನು ನ್ಯಾಯಾಧೀಶರ ಮನೆಯಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚುವರಿ ತನಿಖೆಯ ಅಗತ್ಯವಿರೊ ಹಿನ್ನೆಲೆಯಲ್ಲಿ ಪೊಲೀಸ್ ವಶಕ್ಕೆ ನೀಡುವಂತೆ ಪೊಲೀಸರು ನ್ಯಾಯಾಧೀಶರ ಮುಂದೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ 4 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಅಮೂಲ್ಯಳನ್ನು ಪೊಲೀಸ್ ಕಸ್ಟಡಿಗೆ ನೀಡುತ್ತಿದ್ದಂತೆಯೇ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ರಾತ್ರಿ ಅಮೂಲ್ಯಳನ್ನು ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಕರೆತರಲಾಗುತ್ತಿದ್ದು, ಕಳೆದ ಮೂರು ವರ್ಷಗಳಿಂದಲೂ ಅಮೂಲ್ಯ ಉಳಿದುಕೊಂಡಿದ್ದ ಪಿಜಿಯಲ್ಲಿ ಪರಿಶೀಲನೆಯನ್ನು ನಡೆಸಲಾಗುತ್ತದೆ. ಬೆಳಗ್ಗೆ ಕರೆತಂದ್ರೆ ಭದ್ರತೆಗೆ ಸಮಸ್ಯಯಾಗುತ್ತೆ ಅನ್ನೋ ಹಿನ್ನೆಲೆಯಲ್ಲಿ ರಾತ್ರಿಯೇ ತನಿಖೆಯನ್ನು ನಡೆಸಲಾಗುತ್ತಿದೆ. ಅಮೂಲ್ಯಳನ್ನು ಕರೆತರೋ ಹಿನ್ನೆಲೆಯಲ್ಲಿ ಬಸವೇಶ್ವರ ನಗರ ಪೊಲೀಸ್ ಠಾಣೆಗೆ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ. ಕೆಎಸ್ ಆರ್ ಪಿ ತುಕಡಿ ಹಾಗೂ ಮಹಿಳಾ ಪೊಲೀಸ್ ತುಕಡಿಯನ್ನು ಭದ್ರತೆಗೆ ನಿಯೋಜಿಸಲಾಗಿದ.ೆ
ದೇಶದ್ರೋಹಿ ಅಮೂಲ್ಯ 4 ದಿನ ಪೊಲೀಸ್ ವಶಕ್ಕೆ
- Advertisement -