ಒಂದು ವರ್ಷ ಓಡಾಡುವಂತಿಲ್ಲ ಸಂಸದ ಅನಂತ್ ಕುಮಾರ್ ಹೆಗಡೆ… !!! ನಿವೃತ್ತಿ ಮನಸ್ಸು ಮಾಡಿದ್ರಾ ಫೈರ್ ಬ್ರ್ಯಾಂಡ್ ರಾಜಕಾರಣಿ

ಕಾರವಾರ : ತೀವ್ರ ಸ್ವರೂಪದ ಕಾಲು ಹಾಗೂ ಬೆನ್ನು ನೋವಿನಿಂದಾಗಿ ಸಂಸದ ಅನಂತ್ ಕುಮಾರ್ ಹೆಗಡೆ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಹೀಗಾಗಿ ಅವರು ಸಂಪೂರ್ಣವಾಗಿ ಚೇತರಿಸಿಕೊಳ್ಳಲು ವರ್ಷವೇ ಹಿಡಿಯಲಿದೆ. ಈ ನಡುವಲ್ಲೇ ಫೈರ್ ಬ್ರ್ಯಾಂಡ್ ರಾಜಕಾರಣಿ ಅನ್ನೋ ಖ್ಯಾತಿ ಗಳಿಸಿರುವ ಅನಂತ್ ಕುಮಾರ್ ಹೆಗಡೆ ರಾಜಕೀಯ ನಿವೃತ್ತಿ ಪಡೆಯುತ್ತಾರೆನ್ನುವ ಮಾತುಗಳು ಕೇಳಿಬರುತ್ತಿದೆ.

ಸಂಸದ ಅನಂತ ಕುಮಾರ್ ಹೆಗಡೆ ಅವರ ಆಪ್ತ ಸಹಕಾಯರು ಆರೋಗ್ಯ ಮಾಹಿತಿಯ ಕುರಿತು ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದಾರೆ. ಕಳೆದ ಕೆಲ ತಿಂಗಳಿನಿಂದಲೂ ಬೆನ್ನು ನೋವು ಮತ್ತು ಕಾಲು ನೋವು ಹೆಚ್ಚಾಗಿದ್ದರಿಂದಾಗಿ ತಜ್ಞರ ಸೂಚನೆಯ ಮೇರೆಗೆ ಕಾಲಿನ ಶಸ್ತ್ರ ಚಿಕಿತ್ಸೆಯನ್ನು ನಡೆಸಲಾಗಿದೆ. ಇದೀಗ ಕೆಲವು ದಿನಗಳ ಹಿಂದೆ ನಡೆಸಿದ ಗಂಭೀರ ಶಸ್ತ್ರ ಚಿಕಿತ್ಸೆಯ ನಂತರ ಸಂಸದರು ಚೇತರಿಸಿಕೊಳ್ಳುತ್ತಿದ್ದಾರೆ. ವೈದ್ಯರು ದೀರ್ಘಾವಧಿ ವಿಶ್ರಾಂತಿ ಪಡೆಯುಲು ಸೂಚಿಸಿರುವ ಹಿನ್ನಲೆಯಲ್ಲಿ ಪೂರ್ಣವಾಗಿ ಗುಣಮುಖರಾಗುವ ತನಕ ಸಂಸದರು ಸಾರ್ವಜನಿಕ ಕಾರ್ಯಕ್ರಮ ಹಾಗೂ ಭೇಟಿಗೆ ಲಭ್ಯವಿರುವುದಿಲ್ಲ ಎಂದು ತಿಳಿಸಿದ್ದಾರೆ.

6 ಬಾರಿ ಸಂಸದರಾಗಿರುವ ಅನಂತ್ ಕುಮಾರ್ ಹೆಗಡೆ ಅವರು, ಕೇಂದ್ರ ಸರಕಾರದ ಕೌಶಲಾಭಿವೃದ್ದಿ ಸಚಿವರಾಗ ಸೇವೆ ಸಲ್ಲಿಸಿದ್ದಾರೆ. ಆದರೆ ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸರಕಾರಕ್ಕೆ ಮುಜುಗರ ತರುತ್ತಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿಯೇ ಅನಂತ್ ಕುಮಾರ್ ಹೆಗಡೆ ಅವರು ಕಳೆದ ಲೋಕಸಭಾ ಚುನಾವಣೆಯ ಅವಧಿಯಲ್ಲಿಯೇ ರಾಜಕೀಯ ನಿವೃತ್ತಿಯ ಕುರಿತು ಮಾತನಾಡಿದ್ದರು. ಲೋಕಸಭಾ ಚುನಾವಣೆಯ ಬೆನ್ನಲ್ಲೇ ಸಾರ್ವಜನಿಕ ಸಭೆ, ಸಮಾರಂಭಗಳಿಂದಲೂ ಅಂತರ ಕಾಯ್ದುಕೊಂಡಿದ್ದರು. ಇದೀಗ ತೀವ್ರ ಸ್ವರೂಪದ ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿರುವ ಹಿನ್ನೆಲೆಯಲ್ಲಿ ರಾಜಕೀಯ ನಿವೃತ್ತಿ ಪಡೆಯಲಿದ್ದಾರಾ ಅನ್ನೋ ಮಾತುಗಳು ಕೇಳಿಬರುತ್ತಿದೆ.

Comments are closed.