ಹುಬ್ಬಳ್ಳಿ : ಸಂಸದ ಅನಂತ ಕುಮಾರ್ ಹೆಗಡೆ ಅವರು ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಲ್ಯಾಂಡ್ ಸಮಸ್ಯೆ ಎದುರಾಗಿತ್ತು. ಆದರೆ ವಿಮಾನದ ಫೈಲೆಟ್ ಚಾಣಾಕ್ಷತೆಯಿಂದ ಒಂದು ಗಂಟೆಗಳ ಕಾಲ ಹಾರಾಟ ನಡೆಸಿ ವಿಮಾನವನ್ನು ಸೇಫ್ ಆಗಿ ಲ್ಯಾಂಡಿಂಗ್ ಮಾಡಿದ್ದಾರೆ.

ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಅವರು ಬೆಂಗಳೂರಿನಿಂದ ಹುಬ್ಬಳ್ಳಿ ಇಂಡಿಗೋ ವಿಮಾನದಲ್ಲಿ ಪ್ರಯಾಣ ಬೆಳೆಸುತ್ತಿದ್ದರು. ಈ ವೇಳೆಯಲ್ಲಿ ಹವಾಮಾನದಲ್ಲಿ ವೈಫರುತ್ಯ ಉಂಟಾಗಿತ್ತು.

ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುತ್ತಿತ್ತು. ಇದರಿಂದಾಗಿ ವಿಮಾನವನ್ನು ಲ್ಯಾಂಡಿಂಗ್ ಮಾಡುವುದಕ್ಕೆ ಸಮಸ್ಯೆಯಾಗಿತ್ತು. ಆದರೆ ವಿಮಾನದ ಫೈಲೆಟ್ 6 ಬಾರಿ ಲ್ಯಾಂಡಿಂಗ್ ಮಾಡುವುದಕ್ಕೆ ಯತ್ನಿಸಿದ್ದರೂ ಕೂಡ ಪ್ರಯೋಜನವಾಗಿರಲಿಲ್ಲ.

ವಿಮಾನವನ್ನು ಸುಮಾರು 1 ಗಂಟೆಗಳ ಕಾಲ ಹಾರಾಟವನ್ನು ಮಾಡಿದ ಫೈಲೆಟ್ ಕೊನೆಗೂ ಸೇಫ್ ಆಗಿ ವಿಮಾನವನ್ನು ಲ್ಯಾಂಡಿಂಗ್ ಮಾಡಿದ್ದಾರೆ ಎನ್ನಲಾಗುತ್ತಿದೆ.