ನಾಲ್ವರು ಕೊಲೆ ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್

ಆನೇಕಲ್ : ಕೊಲೆ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿ, ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರು ಹೊರವಲಯದ ಆನನೇಲ್ ತಾಲೂಕಿನ ಮುತ್ಯಾನಲ್ಲೂರು ಹಾಗೂ ಅವಡೆದೇವನಹಳ್ಳಿಯಲ್ಲಿ ನಡೆದಿದೆ.

ಅವಡದೇವನಹಳ್ಳಿಯಲ್ಲಿ ಗೋಪಿ, ಗಂಗಾ ಎಂಬ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದರೆ, ಮುತ್ಯಾನಲ್ಲೂರಿನಲ್ಲಿ ಅನಂತ್, ಬಸವ ಎಂಬುವವರ ಮೇಲೆ ಫೈರಿಂಗ್ ಮಾಡಿದ್ದಾರೆ. ಅ. 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಮಾಡಿದ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಆನೇಕಲ್ ಠಾಣೆ ಪೊಲೀಸರು ಅವಡದೇವನಹಳ್ಳಿಯಲ್ಲಿದ್ದ ಆರೋಪಿಗಳಾದ ಗಂಗಾ ಮತ್ತು ಗೋಪಿಯನ್ನು ಶರಣಾಗುವಂತೆ ಸೂಚಿಸಿದ್ದರು.

ಆದರೆ, ಪೊಲೀಸರ ಮಾತಿಗೆ ಕ್ಯಾರೇ ಎನ್ನದ ಆರೋಪಿಗಳು ಪೇದೆಗಳಾದ ಮಹೇಶ್ ಮತ್ತು ಸುರೇಶ್ ಅವರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸಿದ್ದರು. ಹೀಗಾಗಿ ಆತ್ಮರಕ್ಷಣೆಗಾಗಿ ಆನೇಕಲ್ ಡಿವೈಎಸ್‌ಪಿ ಮಹಾದೇವ್ ಮತ್ತು ಆನೇಕಲ್ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣ ಅವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.

ಅಕ್ಟೋಬರ್ 30ರಂದು ಶೆಟ್ಟಿಹಳ್ಳಿಯಲ್ಲಿ ವಿನೀತ್ ಕೊಲೆ ಹಿನ್ನೆಲೆಯಲ್ಲಿ ಆರೋಪಿಗಳ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಆನೇಕಲ್ ಠಾಣೆ ಪೊಲೀಸರು ಅವಡದೇವನಹಳ್ಳಿಯಲ್ಲಿದ್ದ ಆರೋಪಿಗಳಾದ ಗಂಗಾ ಮತ್ತು ಗೋಪಿಯನ್ನು ಶರಣಾಗುವಂತೆ ಸೂಚಿಸಿದ್ದಾರೆ.

ಆದರೆ ಆರೋಪಿಗಳು ಕಾನ್ಸ್‌ಟೇಬಲ್‌ಗಳಾದ ಮಹೇಶ್ ಮತ್ತು ಸುರೇಶ್ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನಿಸಿದ್ದಾರೆ. ಹೀಗಾಗಿ ಆರೋಪಿಗಳ ಕಾಲಿಗೆ ಆನೇಕಲ್ ಡಿವೈಎಸ್‌ಪಿ ಮಹಾದೇವ್ ಮತ್ತು ಆನೇಕಲ್ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣರಿಂದ ಫೈರಿಂಗ್ ನಡೆದಿದೆ.

ಇನ್ನು ಮುತ್ಯಾನಲ್ಲೂರಿನಲ್ಲಿ ಅನಂತ್ ಮತ್ತು ಬಸವನಿರುವ ಮಾಹಿತಿ ತಿಳಿದ ಅತ್ತಿಬೆಲೆ, ಸರ್ಜಾಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಗಳಿಗೆ ಶರಣಾಗುವಂತೆ ಸೂಚಿಸಿದರು. ಆದರೆ ಆರೋಪಿಗಳು ಶರಣಾಗದೆ ಪಿಸಿಗಳಾದ ಇರ್ಫಾನ್, ನಾಗರಾಜ್‌ ಮೇಲೆ ಹಲ್ಲೆ ಮಾಡಿ ಪರಾರಿಯಾಗುವುದಕ್ಕೆ ಯತ್ನಿಸಿದ್ದಾರೆ.

ಹೀಗಾಗಿ ಅತ್ತಿಬೆಲೆ ಠಾಣೆಯ ಇನ್ಸ್‌ಪೆಕ್ಟರ್ ಸತೀಶ್ ಮತ್ತು ಸರ್ಜಾಪುರ ಎಸ್‌ಐ ಹರೀಶ್‌ರಿಂದ ಗುಂಡಿನ ದಾಳಿ ನಡೆದಿದೆ. ಸದ್ಯ ನಾಲ್ವರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ.

Comments are closed.